ಬೀದರ್: ಜಿಲ್ಲೆಯ ವಿವಿಧೆಡೆ ಗುರುವಾರ ಸಾಧಾರಣ ಮಳೆಯಾಗಿದೆ. ಬೀದರ್ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಮಧ್ಯಾಹ್ನ ಆರಂಭವಾದ ಮಳೆ ತಡ ರಾತ್ರಿಯ ವರೆಗೂ ಜಿಟಿ ಜಿಟಿ ವರೆಗೆ ಮುಂದುವರಿದಿತ್ತು.
ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಧಗೆ ಇತ್ತು. ಮಧ್ಯಾಹ್ನ ಮೋಡಗಳು ಆವರಿಸಿ ಮಳೆ ಸುರಿದಿದೆ. ಭಾಲ್ಕಿ, ಔರಾದ್ ಹಾಗೂ ಹುಲಸೂರು ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.