ಬಸವಕಲ್ಯಾಣ: ‘ತಾಲ್ಲೂಕಿನ ಮುಡಬಿ ಕ್ಷೇತ್ರದ ಜಿ.ಪಂ ಸದಸ್ಯ ರಾಜಶೇಖರ ಮೇತ್ರೆ ಅವರ ಉಚ್ಛಾಟನೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಸೂಚನೆ ಮೇರೆಗೆ ರದ್ದುಗೊಳಿಸಿ ಅವರನ್ನು ಪುನಃ ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ತಿಳಿಸಿದ್ದಾರೆ.
‘ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿಶ್ವಾಸ ನಿರ್ಣಯದ ಸಮಯದಲ್ಲಿ ಅವರು ಅಧಿಕೃತ ಅಭ್ಯರ್ಥಿಗೆ ವಿರುದ್ಧವಾಗಿ ಮತ ಚಲಾಯಿಸಿದ್ದರಿಂದ ಉಚ್ಛಾಟಿಸಲಾ ಗಿತ್ತು. ಆದರೆ, ಅವರು ತಪ್ಪು ಮಾಹಿತಿ ಯಿಂದ ಹೀಗಾಗಿದೆ ಎಂಬ ಕಾರಣ ಕೊಟ್ಟಿದ್ದರಿಂದ ಪುನಃ ಪಕ್ಷಕ್ಕೆ ಸೇರ್ಪಡೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.