ADVERTISEMENT

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 15:40 IST
Last Updated 6 ಜುಲೈ 2019, 15:40 IST
ಪುತ್ತೂರಿನಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಬೀದರ್‌ನಲ್ಲಿ ಶನಿವಾರ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು

ಬೀದರ್: ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.

ಪರಿಷತ್ ರಾಜ್ಯ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಶನಿವಾರ ನಿಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಈ ಕುರಿತು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪರಿಷತ್‌ ರಾಜ್ಯ ಘಟಕದ ಸಹ ಕಾರ್ಯದರ್ಶಿ ರೇವಣಸಿದ್ದ ಜಾಡರ್, ಜಿಲ್ಲಾ ಘಟಕದ ಶಾಂತಕುಮಾರ ಸಂಗೊಳಗೆ, ಅನಿಲ ಚೌಧರಿ, ಅರವಿಂದ ಸುಂದಳಕರ್‌, ರೇವಣ ಚಿಲ್ಲಾಬಟ್ಟೆ, ಭೀಮರಾವ್, ನಾಗೇಶ ಮೇತ್ರೆ, ಗುರಬಸಪ್ಪ ಧನ್ನೂರೆ, ಸಾಯಿ ನಾಸಿಗಾರ, ಚೈತನ್ಯ, ನೇಹಾ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.