
ಪ್ರಜಾವಾಣಿ ವಾರ್ತೆ
ಔರಾದ್: ತಾಲ್ಲೂಕಿನ ವಿವಿಧೆಡೆ ಪಡಿತರ ವಿತರಕರು ಫಲಾನುಭವಿಗಳಿಗೆ ಧಾನ್ಯ ವಿತರಣೆಯಲ್ಲಿ ವಂಚಿಸಲಾಗುತ್ತಿದೆ ಎಂದು ಅಹಿಂದ ಯುವ ಘಟಕ ದೂರು ನೀಡಿದೆ.
ಯುವ ಘಟಕದ ರಾಜಾಧ್ಯಕ್ಷ ಲಕ್ಷ್ಮಣ ದೇವಕತೆ ನೇತೃತ್ವದಲ್ಲಿ ಶುಕ್ರವಾರ ತಹಶೀಲ್ದಾರ್ ಮಹೇಶ ಪಾಟೀಲ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿಪತ್ರ ಸಲ್ಲಿಸಿದರು.
ತಾಲ್ಲೂಕಿನ ವಿವಿಧ ತಾಂಡಾ, ಗ್ರಾಮಗಳಲ್ಲಿ ಪಡಿತರ ವಿತರಕರು ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಧಾನ್ಯ ಕೊಡುತ್ತಿಲ್ಲ. ತೂಕದಲ್ಲಿ ವ್ಯತ್ಯಾಸ ಮಾಡಲಾಗುತ್ತಿದೆ. ಬೆರಳು ಗುರುತು ಪಡೆಯಲು ಹಣ ತೆಗೆದುಕೊಳ್ಳುತ್ತಿದ್ದಾರೆ ಈ ಬಗ್ಗೆ ಪರಿಶೀಲಿಸಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜಕುಮಾರ ಮುದಾಳೆ, ಅಮರೇಶ್ವರ ಸೇರಿದಂತೆ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.