ADVERTISEMENT

ಗಡಿಯಲ್ಲಿ ಕಡಿಮೆಯಾದ ಪ್ರಯಾಣಿಕರ ಸಂಚಾರ

ಚೆಕ್‌ಪೋಸ್ಟ್‌ನಲ್ಲಿ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ ಶುರು

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 12:49 IST
Last Updated 25 ಫೆಬ್ರುವರಿ 2021, 12:49 IST
ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುರುವಾರ ಟೆಂಟ್‌ ಹಾಕಲಾಗಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿ ಮಹಾರಾಷ್ಟ್ರದಿಂದ ಬರುವ ವ್ಯಕ್ತಿಗಳ ತಪಾಸಣೆ ನಡೆಸಿ ಅವರ ಹೆಸರುಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ
ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುರುವಾರ ಟೆಂಟ್‌ ಹಾಕಲಾಗಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿ ಮಹಾರಾಷ್ಟ್ರದಿಂದ ಬರುವ ವ್ಯಕ್ತಿಗಳ ತಪಾಸಣೆ ನಡೆಸಿ ಅವರ ಹೆಸರುಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ   

ಬೀದರ್‌: ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯಲ್ಲಿ ಶನಿವಾರ ಹಾಗೂ ಭಾನುವಾರ ಜನತಾ ಕರ್ಫ್ಯೂ ಜಾರಿಗೊಳಿಸಲಾಗಿದೆ. ಹೀಗಾಗಿ ಕರ್ನಾಟಕ ಹಾಗೂ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ.

ಜನತಾ ಕರ್ಫ್ಯೂ ವೇಳೆ ಅಗತ್ಯ ವಸ್ತುಗಳ ಪೂರೈಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ, ಸಾರಿಗೆ ಸಂಚಾರ, ವಾಣಿಜ್ಯ ಮಳಿಗೆಗಳು ಹಾಗೂ ಮಾರುಕಟ್ಟೆ ಪ್ರದೇಶ ಸಂಪೂರ್ಣವಾಗಿ ಬಂದ್‌ ಇರಲಿದೆ ಎಂದು ಲಾತೂರ್‌ ಜಿಲ್ಲಾಧಿಕಾರಿ ಪೃಥ್ವಿರಾಜ್‌ ಬಿ.ಪಿ. ತಿಳಿಸಿದ್ದಾರೆ.

ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳು ಗಡಿ ಆಚೆಗೆ ಹೋಗಿ ಮರಳಿ ಬರುವಾಗ ಪ್ರತಿ ಬಾರಿಯೂ ಚಾಲಕ ಹಾಗೂ ನಿರ್ವಾಹಕರ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗುತ್ತಿದೆ. ಕರ್ನಾಟಕದ ಗಡಿಯೊಳಗೆ ಬರುವ ಎಂಎಸ್‌ಆರ್‌ಟಿಸಿ ಚಾಲಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ADVERTISEMENT

ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರದ ಚೆಕ್‌ಪೋಸ್ಟ್‌ನಲ್ಲಿ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ ಶುರು ಮಾಡಲಾಗಿದೆ. ಥರ್ಮಲ್‌ ಸ್ಕ್ರೀನಿಂಗ್‌ ಮಾಡಿದ ಸಂದರ್ಭದಲ್ಲಿ ಜ್ವರ ಕಾಣಿಸಿಕೊಂಡರೆ ತಕ್ಷಣ ತುರ್ತು ಪರೀಕ್ಷೆ ನಡೆಸಲಾಗುತ್ತಿದೆ. ಗುರುವಾರ ಮಹಾರಾಷ್ಷ್ರದಿಂದ ಬಂದ ಒಬ್ಬ ಪ್ರಯಾಣಿಕಗೆ ಕೋವಿಡ್‌ ತಗುಲಿರುವುದು ಕಂಡು ಬಂದಿದ್ದು, ತಕ್ಷಣ ಅವರನ್ನು ಮಹಾರಾಷ್ಟ್ರದ ಉಮರ್ಗಾ ಆಸ್ಪತ್ರೆಗೆ ಕಳಿಸಿ ಕೊಡಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.