ADVERTISEMENT

ಬೀದರ್: ಸಚಿವ ಈಶ್ವರ ಖಂಡ್ರೆ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 26 ಜನವರಿ 2025, 4:07 IST
Last Updated 26 ಜನವರಿ 2025, 4:07 IST
   

ಬೀದರ್: ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ತ್ರಿವರ್ಣ ಧ್ವಜಾರೋಹಣ ಮಾಡಿದರು.

ನಂತರ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಪೊಲೀಸರು, ಡಿಎಆರ್ ಪೊಲೀಸರು, ಎನ್ಎನ್ ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ತುಕಡಿಗಳಿಂದ ಪಥ ಸಂಚಲನ ನಡೆಯಿತು.

ಬಳಿಕ ಮಾತನಾಡಿದ ಖಂಡ್ರೆ, ಅನೇಕ ಜನರ ತ್ಯಾಗ, ಬಲಿದಾನದಿಂದ ಈ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಹಿರಿಯರೆಲ್ಲರೂ ಸೇರಿ ಈ ದೇಶವನ್ನು ಗಣರಾಜ್ಯ ದೇಶವಾಗಿ ಮಾಡಿದ್ದಾರೆ. ಸಂವಿಧಾನವನ್ನು ರಚಿಸಿ ಅದರ ಆಧಾರದ ಮೇಲೆ ದೇಶ ನಡೆಸಲು ಚೌಕಟ್ಟು ಹಾಕಿಕೊಟ್ಟಿದ್ದಾರೆ. ಅದರಂತೆ ದೇಶ ನಡೆಯುತ್ತಿದ್ದು, ಅನೇಕ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿ ಮುನ್ನಡೆದಿದೆ ಎಂದರು.

ADVERTISEMENT

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ,‌ಡಿಸಿಎಫ್ ವಾನತಿ ಎಮ್.ಎಮ್. ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.