
ಪ್ರಜಾವಾಣಿ ವಾರ್ತೆ
ಬಸವಕಲ್ಯಾಣ: ತಾಲ್ಲೂಕಿನ ಕಿಟ್ಟಾ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಚಟುವಟಿಕೆಗಳು ನಡೆದವು.
ರೈತ ಮುಖಂಡ ವೀರಾರೆಡ್ಡಿ, ಮುಖ್ಯ ಶಿಕ್ಷಕ ಸೋಮನಾಥ ಬೇಲೂರೆ, ಶಿಕ್ಷಕ ಮಾರುತಿ ಮಂಗನಾಳೆ ಮಾತನಾಡಿದರು. ಸಾಮಾಜಿಕ ಕಾರ್ಯಕರ್ತ ಮಾರುತಿ ಫುಲೆ ಅವರನ್ನು ಸನ್ಮಾನಿಸಲಾಯಿತು.
ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ಪಂಚಾಳ, ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ ಮಂಠಾಳೆ, ಬಾಬುರಾವ್ ಒಂಟೆ, ಬಸವರಾಜ ಹುಡೆ, ರಾಧಿಕಾ ತಾಂದಳೆ, ಹಣಮಂತ ಸಸ್ತಾಪುರೆ, ಸಂತೋಷ ವೀರಣ್ಣೋರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.