ADVERTISEMENT

ಗಣರಾಜ್ಯೋತ್ಸವ: ರಾಯಣ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 8:34 IST
Last Updated 25 ಜನವರಿ 2023, 8:34 IST
ರಾಕೇಶ್ ಕುರುಬಖೇಳಗಿ
ರಾಕೇಶ್ ಕುರುಬಖೇಳಗಿ   

ಬೀದರ್: ಗಣರಾಜ್ಯೋತ್ಸವ ದಿನ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರ ಇರಿಸಿ ಪೂಜೆ ಸಲ್ಲಿಸಬೇಕು ಎಂದು ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಕೇಶ ಚೆನ್ನಪ್ಪನೋರ್ ಕುರುಬಖೇಳಗಿ ಒತ್ತಾಯಿಸಿದ್ದಾರೆ.

ರಾಯಣ್ಣ ಅವರು ಸ್ವಾತಂತ್ರ್ಯೋತ್ಸವ ದಿನವಾದ ಆಗಸ್ಟ್ 15 ರಂದು ಜನಿಸಿ, ಗಣರಾಜ್ಯೋತ್ಸವ ದಿನವಾದ ಜನವರಿ 26 ರಂದು ಮರಣ ಹೊಂದಿದ್ದರು ಎಂದು ಹೇಳಿದ್ದಾರೆ.

ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಟ ನಡೆಸಿದ್ದರು. ಅವರ ಜೀವನ ಹಾಗೂ ಸಾಧನೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ದಿಸೆಯಲ್ಲಿ ಗಣರಾಜ್ಯೋತ್ಸವ ದಿನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸ್ವಯಂ ಪ್ರೇರಣೆಯಿಂದ ರಾಯಣ್ಣ ಅವರಿಗೆ ಗೌರವ ಸಮರ್ಪಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.