ADVERTISEMENT

ಬೀದರ್-ಪುಣೆ ವಿಮಾನ ಸೇವೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 13:54 IST
Last Updated 1 ಸೆಪ್ಟೆಂಬರ್ 2021, 13:54 IST
ಬೀದರ್-ಪುಣೆ ನಡುವೆ ನಾಗರಿಕ ವಿಮಾನ ಸೇವೆ ಪ್ರಾರಂಭಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನವದೆಹಲಿಯಲ್ಲಿ ಮನವಿ ಪತ್ರ ಸಲ್ಲಿಸಿದರು
ಬೀದರ್-ಪುಣೆ ನಡುವೆ ನಾಗರಿಕ ವಿಮಾನ ಸೇವೆ ಪ್ರಾರಂಭಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನವದೆಹಲಿಯಲ್ಲಿ ಮನವಿ ಪತ್ರ ಸಲ್ಲಿಸಿದರು   

ಬೀದರ್: ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಬೀದರ್-ಪುಣೆ ನಡುವೆ ನಾಗರಿಕ ವಿಮಾನ ಸೇವೆ ಆರಂಭಿಸಬೇಕು ಎಂದು ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಅವರನ್ನು ಭೇಟಿ ಮಾಡಿ ಬೀದರ್‌ನಿಂದ ಪುಣೆಗೆ ತೆರಳಬೇಕಾದರೆ ಕನಿಷ್ಠ 10 ತಾಸುಗಳು ಬೇಕಾಗುತ್ತವೆ. ಹೀಗಾಗಿ ವಿಮಾನ ಸೇವೆ ಶುರು ಮಾಡಿದರೆ ಜಿಲ್ಲೆಯ ವ್ಯಾಪಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಬಹಳ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿದರು.

ಕೇಂದ್ರ ವಾರ್ತಾ, ಪ್ರಸಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾಗಿ, ಖೇಲೋ ಇಂಡಿಯಾ ಅಡಿಯಲ್ಲಿ ಬೀದರ್ ಜಿಲ್ಲೆಯಲ್ಲಿ ಹೊಸ ಕ್ರೀಡಾಂಗಣ ನಿರ್ಮಿಸಬೇಕು ಎಂದು ಬೇಡಿಕೆ ಮಂಡಿಸಿದರು.

ADVERTISEMENT

ಬೀದರ್‌ನಲ್ಲಿ ಎಫ್‍ಎಂ ರೆಡಿಯೊ ಹಾಗೂ ಆಕಾಶವಾಣಿ ಕೇಂದ್ರಗಳನ್ನು ಪ್ರಾರಂಭಿಸಬೇಕು ಎಂದು ಕೋರಿದರು.

ಇಬ್ಬರೂ ಸಚಿವರು ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಬೇಡಿಕೆಗಳ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಭಗವಂತ ಖೂಬಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.