ADVERTISEMENT

ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2024, 14:33 IST
Last Updated 28 ಫೆಬ್ರುವರಿ 2024, 14:33 IST
ಬೆಂಗಳೂರಿನಲ್ಲಿ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಸನ್ಮಾನಿಸಲಾಯಿತು
ಬೆಂಗಳೂರಿನಲ್ಲಿ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಸನ್ಮಾನಿಸಲಾಯಿತು   

ಭಾಲ್ಕಿ: ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವಂತೆ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮನವಿ ಮಾಡಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಬುಧವಾರ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಸನ್ಮಾನಿಸಿದ ಅವರು, ‘ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವ ತಮ್ಮ ಸರ್ಕಾರಕ್ಕೆ ಅಭಿನಂದಿಸುತ್ತೇನೆ. ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆಗೆ ಬಜೆಟ್‍ನಲ್ಲಿ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಅದೇ ರೀತಿ ಬಸವಕಲ್ಯಾಣದಲ್ಲಿ ವಚನ ಸಾಹಿತ್ಯ ವಿಶ್ವವಿದ್ಯಾಲಯ ಸ್ಥಾಪಿಸುವುದರಿಂದ ಬಸವಾದಿ ಶರಣರ ತತ್ವಗಳು ಜಗದಗಲ ತಲುಪಿಸಲು ಸಹಕಾರಿ ಆಗುತ್ತದೆ. ವಚನ ಸಾಹಿತ್ಯ ಅಧ್ಯಯನ, ಸಂಶೋಧನೆ ನಡೆಸಲು ಅನುಕೂಲವಾಗುತ್ತದೆ’ ಎಂದು ಮನವರಿಕೆ ಮಾಡಿದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಪ್ರಮುಖರಾದ ಶಶಿಧರ ಕೋಸಂಬೆ, ಜಯರಾಜ ಖಂಡ್ರೆ, ಸಂಗಮೇಶ ಹುಣಜೆ , ರಾಜಕುಮಾರ ಬಿರಾದಾರ, ಸಂಜೀವಕುಮಾರ ಜುಮ್ಮಾ, ನವಲಿಂಗ ಪಾಟೀಲ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.