ADVERTISEMENT

‘ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ’

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 13:42 IST
Last Updated 25 ನವೆಂಬರ್ 2022, 13:42 IST
ಹುಲಸೂರ ಪಟ್ಟಣದ ಹೊರವಲಯದಲ್ಲಿರುವ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ಮತದಾರರ ನೋಂದಣಿ ಹಾಗೂ ಮತದಾನ ಜಾಗೃತಿ ಅಭಿಯಾನ ನಡೆಯಿತು
ಹುಲಸೂರ ಪಟ್ಟಣದ ಹೊರವಲಯದಲ್ಲಿರುವ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ಮತದಾರರ ನೋಂದಣಿ ಹಾಗೂ ಮತದಾನ ಜಾಗೃತಿ ಅಭಿಯಾನ ನಡೆಯಿತು   

ಹುಲಸೂರ: ‘18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬೇಕು’ ಎಂದು ತಹಶೀಲ್ದಾರ್ ಶಿವಾನಂದ ಮೇತ್ರೆ ತಿಳಿಸಿದರು.

ಪಟ್ಟಣದ ಹೊರವಲಯದಲ್ಲಿರುವ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆದ ಹೊಸ ಮತದಾರರ ನೋಂದಣಿ ಹಾಗೂ ಮತದಾನ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.

ಇಂದಿನ ವಿದ್ಯಾರ್ಥಿಗಳು ನಾಳೆಯ ಭವಿಷ್ಯ. ಹಾಗಾಗಿ ಮತದಾನ ಮಾಡುವ ಮೂಲಕ ಬಲಿಷ್ಠ ಭಾರತ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜುನ ಕಾಂಬಳೆ,‘ವಿದ್ಯಾರ್ಥಿಗಳು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಮಹತ್ವ ನೀಡಬೇಕು. ಜತೆಗೆ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಬೇಕು’ ಎಂದು ತಿಳಿಸಿದರು.

ಕಾಲೇಜಿನ ಮತದಾರರ ಸಾಕ್ಷರತಾ ಕ್ಲಬ್‌ನ ಸಂಚಾಲಕ ಡಾ.ಮಾರುತಿಕುಮಾರ, ಪ್ರಾಧ್ಯಾಪಕರಾದ ಬಸವರಾಜ ಮೈಲಾರೆ, ಸಂತೋಷ ಮಹಾಜನ, ಕುಪೇಂದ್ರ ರಾಠೋಡ, ಗಾನಶೃತಿ, ಬೋಧಕೇತರ ಸಿಬ್ಬಂದಿ ರಾಜರೆಡ್ಡಿ, ಮಲ್ಲಿಕಾರ್ಜುನ ಹಾಗೂ ನರಸಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.