ADVERTISEMENT

ಬೈಕ್–ಲಾರಿ ಡಿಕ್ಕಿ: ಬಾಲಕ ಸಾವು

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2018, 15:37 IST
Last Updated 10 ಡಿಸೆಂಬರ್ 2018, 15:37 IST

ಬೀದರ್: ನಗರದ ನಂದಿ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೈಕ್ ಮತ್ತು ಲಾರಿ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅಣ್ಣನೊಂದಿಗೆ ಬೈಕ್‌ ಮೇಲೆ ಹೊರಟಿದ್ದ ವಿಜಡಂ ಶಾಲೆಯ ಏಳನೆಯ ತರಗತಿಯ ವಿದ್ಯಾರ್ಥಿ ಅಲ್ತಾಫ್‌ ಅಲಿ (13) ಮೃತಪಟ್ಟವನು. ರಾಫತ್ ಅಲಿ(18) ಗಂಭೀರವಾಗಿ ಗಾಯಗೊಂಡಿದ್ದು, ಆತನಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‌ ಆಸ್ಪತ್ರೆಗೆ ಕಳಿಸಲಾಗಿದೆ.

ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.