ಚಿಟಗುಪ್ಪ (ಹುಮನಾಬಾದ್): ರಾಜ್ಯದಲ್ಲಿ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಪೂರೈಕೆ ಮಾಡದಿರುವುದನ್ನು ಖಂಡಿಸಿ ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಮಂಡಲ ವತಿಯಿಂದ ತಾಲ್ಲೂಕಿನ ಮನ್ನಾಏಖೇಳ್ಳಿ ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನಾ ಮೆರವಣಿಗೆಯು ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ನಡೆಯಿತು. ನಂತರ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನಕಾರರು ರಸ್ತೆ ತಡೆ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಪಕ್ಷದ ಪ್ರಮುಖರು ಮಾತನಾಡಿ,‘ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಕೆ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ 8.70 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಸರಬರಾಜು ಆಗಿದೆ. ಈಗ 5.25 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಮಾತ್ರ ರಾಜ್ಯದ ಮಾರುಕಟ್ಟೆಯಲ್ಲಿ ಇದೆ. ಉಳಿದ 2.50 ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಏನಾಗಿದೆ ಎಂಬುದು ಸರ್ಕಾರ ರೈತರಿಗೆ ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದರು.
ಬಳಿಕ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಕುಂತಲಾ ಬೆಲ್ದಾಳೆ, ರಾಜರಡ್ಡಿ ಶಾಬಾದಕರ್, ಹೇಮ್ಮಾ ತುಕ್ಕಾರೆಡ್ಡಿ, ಮಾಣಿಕಪ್ಪ ಖಾಶಂಪೂರ್, ಸಂತೋಷ್ ನಿಡವಂಚಿ , ಸಂತೋಷ್ ರೆಡ್ಡಿ ಆವಣದೋರ್, ಗುಂಡಪ್ಪ ಭೋದೆರಾ, ಜಗನ್ನಾಥ ಜಮಾದಾರ್, ಶಿವಕುಮಾರ್ ಸ್ವಾಮಿ, ಸಂತೋಷ್ ಶಂಭು, ರಾಜು ಪಂಚಾಳ, ಬಸವ, ಜಗನ್ನಾಥ ಆರ್ಯ, ದೇವೇಂದ್ರ, ರಾಮುಲು, ಪ್ರವೀಣ್ ತರಿ, ಬಸವರಾಜ ಚಟನ್ನಳ್ಳಿ, ನಾರಾಯಣ್ ರೆಡ್ಡಿ ಮಂಗಲಗಿ ಸೇರಿದಂತೆ ಇತರರು ಇದ್ದರು.
ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಮೊದಲು ₹25 ಸಾವಿರ ಇತ್ತು. ಈಗ 3 ಲಕ್ಷ ಆಗಿದೆ. ರಾಜ್ಯ ಸರ್ಕಾರ ಇದನ್ನು ಹಿಂಪಡೆದು ರೈತರಿಗೆ ಅನುಕೂಲ ಮಾಡಬೇಕು.- ಗುರುನಾಥ್ ರಾಜಗೀರಾ, ಬಿಜೆಪಿ ಮಂಡಲ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.