ADVERTISEMENT

ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಸೂಚನೆ

ರಸ್ತೆ ನಿರ್ಮಾಣ ಕಾಮಗಾರಿಗೆ ಸಂಸದ ಸಾಗರ ಖಂಡ್ರೆ ಭೂಮಿ ಪೂಜೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 5:28 IST
Last Updated 8 ಜುಲೈ 2025, 5:28 IST
ಹುಲಸೂರ ಸಮೀಪದ ಭಾಲ್ಕಿ ತಾಲ್ಲೂಕಿನ ಹರೇವಾಡಿ ಗ್ರಾಮದಿಂದ ಅಟ್ಟರಗಾ ಗ್ರಾಮದವರೆಗೆ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಸದ ಸಾಗರ ಈಶ್ವರ ಖಂಡ್ರೆ ಸೋಮವಾರ ಭೂಮಿ ಪೂಜೆ ನೆರವೇರಿಸಿದರು 
ಹುಲಸೂರ ಸಮೀಪದ ಭಾಲ್ಕಿ ತಾಲ್ಲೂಕಿನ ಹರೇವಾಡಿ ಗ್ರಾಮದಿಂದ ಅಟ್ಟರಗಾ ಗ್ರಾಮದವರೆಗೆ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಸದ ಸಾಗರ ಈಶ್ವರ ಖಂಡ್ರೆ ಸೋಮವಾರ ಭೂಮಿ ಪೂಜೆ ನೆರವೇರಿಸಿದರು    

ಹುಲಸೂರ: ರೈತರು, ಯುವಕರು ಸೇರಿದಂತೆ ಮತಕ್ಷೇತ್ರದ ವ್ಯಾಪ್ತಿಯ ಎಲ್ಲರ ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ದಿಯೇ ನನ್ನ ಕನಸಾಗಿದೆ. ಆ ಗುರಿಯೊಂದಿಗೆ ಕೆಲಸ ಮಾಡುತ್ತಿರುವುದಾಗಿ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.

ಹುಲಸೂರ ಸಮೀಪದ ಭಾಲ್ಕಿ ತಾಲ್ಲೂಕಿನ ಹರೇವಾಡಿ ಗ್ರಾಮದಿಂದ ಅಟ್ಟರಗಾ ಗ್ರಾಮದವರೆಗೆ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ ಅಡಿಯಲ್ಲಿ ಅಂದಾಜು ₹3 ಕೋಟಿ 15 ಲಕ್ಷ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಸದ ಸಾಗರ ಈಶ್ವರ ಖಂಡ್ರೆ ಸೋಮವಾರ ಹರೇವಾಡಿ ಗ್ರಾಮದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

‘ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ರಸ್ತೆ ನಿರ್ಮಿಸಲಾಗುತ್ತಿದೆ. ಗ್ರಾಮದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ. ನಿಗದಿತ ಸಮಯದಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ಹೇಳಿದರು.

ADVERTISEMENT

ಗ್ರಾಮ ಪಂಚಾಯತಿ ಅಧ್ಯಕ್ಷ ಖಂಡು ಕಾಸರ ಮಾತನಾಡಿ, ‘ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಸಂಸದ ಸಾಗರ ಖಂಡ್ರೆ ಅವರ ಅವಿರತ ಶ್ರಮದಿಂದ ತಾಲ್ಲೂಕಿನಲ್ಲಿ ಹಂತ ಹಂತವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ದಿ ಹೊಂದುತ್ತಿದೆ. ಇವರ ಸಹಕಾರದಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳಲ್ಲಿ ಮೂಲಸೌಕರ್ಯಗಳನ್ನು ಒದಗಿಸಿದ್ದಾರೆ’ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರವೀಣ ಹನುಮಶೆಟ್ಟಿ, ಶರದ್‌ ಗಂದಗೆ, ಸಾಯಗಾಂವ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ ನಿಂಬಾಳ್ಕರ್, ಪ್ರಮುಖರಾದ ದಿಲೀಪ್ ಪಾಟಿಲ, ಗಣಪತರಾವ ಪಾಟೀಲ, ಮಾರುತಿ ಮಗರ, ಗಜಾನಂದ ಮೊಳಕೆರೆ, ಹಂಸರಾಜ ಪಾಟಿಲ, ಪ್ರವೀಣಸ್ವಾಮಿ, ಗೋಪಾಳ ಸೂರ್ಯವಂಶಿ ಸೇರಿ ವಿವಿಧ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.