ADVERTISEMENT

ಚರ್ಚ್ ಅಭಿವೃದ್ಧಿಗೆ ₹50 ಲಕ್ಷ ಅನುದಾನ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2019, 10:03 IST
Last Updated 24 ಡಿಸೆಂಬರ್ 2019, 10:03 IST
ಬೀದರ್‌ನ ಸೇಂಟ್ ಪೌಲ್ ಮೆಥೋಡಿಸ್ಟ್ ಚರ್ಚ್‌ಗೆ ಅನುದಾನ ಒದಗಿಸುವಂತೆ ಕೋರಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಬೀದರ್‌ನ ಸೇಂಟ್ ಪೌಲ್ ಮೆಥೋಡಿಸ್ಟ್ ಚರ್ಚ್‌ಗೆ ಅನುದಾನ ಒದಗಿಸುವಂತೆ ಕೋರಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್: ಇಲ್ಲಿಯ ಮಂಗಲಪೇಟ್‌ನಲ್ಲಿರುವ ಸೇಂಟ್ ಪೌಲ್ ಮೆಥೋಡಿಸ್ಟ್ ಚರ್ಚ್ ಅಭಿವೃದ್ಧಿ ಹಾಗೂ ದುರಸ್ತಿಗೆ ತಮ್ಮ ವಿಶೇಷ ಅನುದಾನದಡಿ ₹50 ಲಕ್ಷ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ.

ಬೆಂಗಳೂರಿನಲ್ಲಿ ತಮ್ಮನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರ ಮನವಿಗೆ ಸ್ಪಂದಿಸಿ ಈ ಆದೇಶ ನೀಡಿದ್ದಾರೆ.

ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ ಅವರು, ಮುಖ್ಯಮಂತ್ರಿ ಅವರ ಆದೇಶದನ್ವಯ ಅನುದಾನ ಒದಗಿಸಲು ಕ್ರಮ ಕೈಗೊಳ್ಳುವಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.