ಔರಾದ್: ಜಿಲ್ಲಾ ಹಾಗೂ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘದ ಆಶ್ರಯದಲ್ಲಿ ಶನಿವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನಾಥ ಮಕ್ಕಳಿಗೆ ಆಧಾರ್ ಕಾರ್ಡ್ ವಿತರಿಸಲಾಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ ಬನಸೋಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ‘ಸಮಾಜದ ಕಟ್ಟ ಕಡೆ ವ್ಯಕ್ತಿಗಳು ಸರ್ಕಾರಿ ಸೌಲಭ್ಯ ಸಿಗಬೇಕು. ಈ ನಿಟ್ಟಿನಲ್ಲಿ ಅನಾಥ ಹಾಗೂ ನಿರ್ಗತಿಕ ಮಕ್ಕಳಿಗೆ ಶಾಲೆಗೆ ಸೇರಿಸಲು ಸರ್ಕಾರದಿಂದಲೇ ಆಧಾರ ಕಾರ್ಡ್ ಕೊಡುವ ವ್ಯವಸ್ಥೆ ಇದೆ’ ಎಂದು ಹೇಳಿದರು.
ತಹಶೀಲ್ದಾರ್ ಮಹೇಶ ಪಾಟೀಲ ಮಾತನಾಡಿ, ‘ಬೀದಿ ಮಕ್ಕಳು, ಕೊಳೆಗೇರಿ ಮಕ್ಕಳು, ಬಸ್, ರೈಲು ನಿಲ್ದಾಣದಲ್ಲಿ ಇರುವ ಮಕ್ಕಳನ್ನು ಗುರುತಿಸಿ ಅವರಿಗೆ ಆಧಾರ್ ಕಾರ್ಡ್ ಮಾಡಿಕೊಟ್ಟು ಅವರನ್ನು ಶಿಕ್ಷಣ, ಆರೋಗ್ಯ ಯೋಜನೆಯಲ್ಲಿ ಸೇರಿಸುವುದು ಸರ್ಕಾರದ ಉದ್ದೇಶವಾಗಿದೆ’ ಎಂದರು.
ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಹಾಜಿ ಹುಸೇನಸಾಬ್ ಯಾದವಾಡ, ಕಾರ್ಯದರ್ಶಿ ವಿನಾಯಕ ವಾನಖಂಡೆ, ವಕೀಲರ ಸಂಘದ ಅಧ್ಯಕ್ಷ ಬಾಲಾಜಿ ಕಂಬಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇಮಾಲಪ್ಪ, ಆಕಾಶ ಸಜ್ಜನಶೆಟ್ಟಿ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.