ADVERTISEMENT

ಸಂಕ್ಷಿಪ್ತ ಸುದ್ದಿ:

​ಪ್ರಜಾವಾಣಿ ವಾರ್ತೆ
Published 11 ಮೇ 2022, 13:18 IST
Last Updated 11 ಮೇ 2022, 13:18 IST

ಇಂದು ನಗರಕ್ಕೆ ಸಫಾಯಿ ಕರ್ಮಚಾರಿ ನಿಗಮ ಅಧ್ಯಕ್ಷ


ಬೀದರ್: ರಾಜ್ಯ ಸಫಾಯಿ ಕರ್ಮಚಾರಿ ನಿಗಮದ ಅಧ್ಯಕ್ಷ ಎಚ್. ಹನುಮಂತಪ್ಪ ಮೇ 12 ರಂದು ನಗರಕ್ಕೆ ಬರಲಿದ್ದಾರೆ.
ಬೆಳಿಗ್ಗೆ 9ಕ್ಕೆ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು ಹಾಗೂ ಮುಖಂಡರ ಜತೆ ನೇರ ಸಂವಾದ ನಡೆಸುವರು. ಬೆಳಿಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ, ತಾಲ್ಲೂಕುಮಟ್ಟದ ಅಧಿಕಾರಿಗಳೊಂದಿಗೆ ಪೌರ ಕಾರ್ಮಿಕರ ಕುಂದು ಕೊರತೆ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ತಿಳಿಸಿದ್ದಾರೆ.

* * *
ಸಹಾಯಧನ, ಕ್ಯಾಲಿಫರ್‍ಗೆ ಅರ್ಜಿ ಆಹ್ವಾನ

ಬೀದರ್: ಬೀದರ್ ನಗರಸಭೆಯ 2019-20 ಹಾಗೂ 2020-21ನೇ ಸಾಲಿನ ಶೇ 24.10, 7.25 ಎಸ್‍ಎಫ್‍ಸಿ(ಮುಕ್ತನಿಧಿ) ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಬಡ ವಿದ್ಯಾರ್ಥಿಗಳಿಂದ ಸಹಾಯಧನ ಹಾಗೂ ಕ್ಯಾಲಿಫರ್ ವಿತರಣೆಗಾಗಿ ಅಂಗವಿಕಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ನಗರಸಭೆ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಮೇ 27 ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

* * *
ಉಪ ಚುನಾವಣೆ: ಮದ್ಯ ಮಾರಾಟ ನಿಷೇಧ

ADVERTISEMENT

ಬೀದರ್: ಬಸವಕಲ್ಯಾಣ ನಗರಸಭೆಯ ವಾರ್ಡ್ ಸಂಖ್ಯೆ 25 ರ ಸದಸ್ಯ ಸ್ಥಾನದ ಉಪ ಚುನಾವಣೆ ಪ್ರಯುಕ್ತ ವಾರ್ಡ್ ವ್ಯಾಪ್ತಿಯಲ್ಲಿ ಮೇ 18 ರ ರಾತ್ರಿ 12 ರಿಂದ 20ರ ರಾತ್ರಿ 12 ರವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಬೀದರ್ ತಾಲ್ಲೂಕು: ಬೀದರ್ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ 19 ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆ ನಿಮಿತ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇ 18 ರ ಸಂಜೆ 5 ರಿಂದ 20 ರ ರಾತ್ರಿ 12 ರ ವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.