ADVERTISEMENT

ಆಂಬುಲೆನ್ಸ್‌ನಲ್ಲಿ ಸುರಕ್ಷಿತ ಹೆರಿಗೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2021, 3:44 IST
Last Updated 3 ಜನವರಿ 2021, 3:44 IST
ಚಿಟಗುಪ್ಪ ತಾಲ್ಲೂಕಿನ ಮನ್ನಾಎಖ್ಖೇಳಿ ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಸಿಂಧೋಲ ತಾಂಡ ಗರ್ಭಿಣಿ ಮಹಿಳೆಗೆ ಹೆರಿಗೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ವಾಹನದಲ್ಲಿಯೇ ಮಗುವಿಗೆ ಜನ್ಮ ನೀಡಿರುವುದು
ಚಿಟಗುಪ್ಪ ತಾಲ್ಲೂಕಿನ ಮನ್ನಾಎಖ್ಖೇಳಿ ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಸಿಂಧೋಲ ತಾಂಡ ಗರ್ಭಿಣಿ ಮಹಿಳೆಗೆ ಹೆರಿಗೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ವಾಹನದಲ್ಲಿಯೇ ಮಗುವಿಗೆ ಜನ್ಮ ನೀಡಿರುವುದು   

ಚಿಟಗುಪ್ಪ: ಸಮೀಪದ ಸಿಂಧೋಲ ತಾಂಡಾ ನಿವಾಸಿ ಶಾಂತಾಬಾಯಿ ಅರ್ಜುನ ಇವರಿಗೆ 108 ಆಂಬುಲೆನ್ಸ್‌ ನಲ್ಲಿ ಸುರಕ್ಷಿತ ಹೆರಿಗೆ ಮಾಡಿಸಲಾಗಿದೆ.

ಹೆರಿಗೆ ಬಳಿಕ ತಾಯಿ ಮತ್ತು ಮಗು ಆರೋಗ್ಯದಿಂದ ಇದ್ದಾರೆ. ಬಗದಲ್ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಹೆರಿಗೆ ನೋವು ಕಂಡ ತಕ್ಷಣ ಮನ್ನಾಏಖ್ಖಳಿ ಆಸ್ಪತ್ರೆಯಿಂದ 108 ಆಂಬುಲೆನ್ಸ್‌ನಲ್ಲಿ ಬೀದರ್‍ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೆರಿಗೆ ನೋವು ಮತ್ತಷ್ಟು ಹೆಚ್ಚಿತು. ಆಗ ವೈದ್ಯಕೀಯ ಸಿಬ್ಬಂದಿ ವಿದ್ಯಾಸಾಗರ್, ಚಾಲಕ ಬಾಬುಮಿಯಾ ಗೌತಮ್ ಪತಂಗೆ ರಸ್ತೆ ಪಕ್ಕದಲ್ಲಿ ಆಂಬುಲೆನ್ಸ್‌ ನಿಲ್ಲಿಸಿ, ಪ್ರಸವ ಕ್ರಿಯೆಯನ್ನು ಪೂರ್ಣಗೊಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.