ADVERTISEMENT

‘ಪಾಪನಾಶ ದೇಗುಲಕ್ಕೆ ಅನುದಾನ ಕೊಡಿ’

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2024, 15:54 IST
Last Updated 13 ಆಗಸ್ಟ್ 2024, 15:54 IST
ಸಂಸದ ಸಾಗರ್‌ ಖಂಡ್ರೆ ಅವರು ನವದೆಹಲಿಯಲ್ಲಿ  ಮಂಗಳವಾರ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದರು
ಸಂಸದ ಸಾಗರ್‌ ಖಂಡ್ರೆ ಅವರು ನವದೆಹಲಿಯಲ್ಲಿ  ಮಂಗಳವಾರ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದರು    

ಬೀದರ್‌: ‘ನಗರದ ಪಾಪನಾಶ ದೇಗುಲದ ಜೀರ್ಣೊದ್ಧಾರಕ್ಕೆ ಕೇಂದ್ರ ಸರ್ಕಾರ ಘೋಷಿಸಿದ ₹22 ಕೋಟಿಯನ್ನು ಆದಷ್ಟು ಬೇಗ ಬಿಡುಗಡೆಗೊಳಿಸಬೇಕು’ ಎಂದು ಸಂಸದ ಸಾಗರ್‌ ಖಂಡ್ರೆ ಮನವಿ ಮಾಡಿದ್ದಾರೆ.

ಈ ಸಂಬಂಧ ಅವರು ನವದೆಹಲಿಯಲ್ಲಿ ಮಂಗಳವಾರ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕೇಂದ್ರದ ಪ್ರಸಾದ್ ಯೋಜನೆಯಡಿ ಇತಿಹಾಸ ಪ್ರಸಿದ್ಧ ಕ್ಷೇತ್ರ ಪಾಪನಾಶ ಮಂದಿರ ಆಯ್ಕೆ ಮಾಡಲಾಗಿದೆ. ಮಂದಿರದ ಜೀರ್ಣೋದ್ಧಾರಕ್ಕೆ ₹22 ಕೋಟಿ ಅನುದಾನ ಘೋಷಣೆಯಾಗಿದೆ. ಅದನ್ನು ಶೀಘ್ರ ಬಿಡುಗಡೆಗೊಳಿಸಿದರೆ ದೇಗುಲದ ಸಂಪೂರ್ಣ ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.