ಬೀದರ್: ವೀರಶೈವ ಲಿಂಗಾಯತ ಸೇವಾ ಸಮಿತಿಯ ವತಿಯಿಂದ ನಗರದ ಪಾಪನಾಶ ದೇಗುಲದಲ್ಲಿ ಸೋಮವಾರ ಸಂಜೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನೂತನ ಸಂಸದ ಸಾಗರ ಖಂಡ್ರೆ ಅವರನ್ನು ಅಭಿನಂದಿಸಲಾಯಿತು.
ಐತಿಹಾಸಿಕ ಪಾಪನಾಶ ದೇವಸ್ಥಾನಕ್ಕೆ ಅಗತ್ಯ ಸೌಕರ್ಯ ಕಲ್ಪಿಸಲು ಪ್ರಾಮುಖ್ಯತೆ ನೀಡಲಾಗುವುದು. ಸಂಸದನಾಗಿ ನನ್ನನ್ನು ಆಯ್ಕೆಗೊಳಿಸಿರುವ ಕ್ಷೇತ್ರದ ಜನರ ಹಿತ ರಕ್ಷಣೆಯೇ ನನ್ನ ಧ್ಯೇಯವಾಗಿದೆ ಎಂದು ಖಂಡ್ರೆ ಹೇಳಿದರು.
ವೀರಶೈವ ಲಿಂಗಾಯತ ಸೇವಾ ಸಮಿತಿ ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ ಎಂದು ಸಾನಿಧ್ಯ ವಹಿಸಿದ್ದ ಹಲಬರ್ಗಾ-ಶಿವಣಿ-ಹೈದರಾಬಾದ್ ಮಠದ ಹಾವಗಿಲಿಂಗೇಶ್ವರ ಶಿವಾಚಾರ್ಯ ತಿಳಿಸಿದರು.
ಭಾಲ್ಕಿ ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಮಡಿವಾಳಪ್ಪ ಮಂಗಲಗಿ, ಮುಖಂಡರಾದ ವಕೀಲ ಬಾಪುರಾವ್ ದೇಶಮುಖ, ಜಗನ್ನಾಥ ಕರಂಜೆ, ಚಂದ್ರಕಾಂತ ಶೆಟಕಾರ್, ಚಂದ್ರಶೇಖರ ಬನ್ನಾಳೆ, ರಾಜಕುಮಾರ ನಾಯಿಕೋಡೆ, ಸುದರ್ಶನ್ ಬಿರಾದಾರ, ಜ್ಯೋತಿಷ್ ಹಲಬುರ್ಗೆ, ಪವನಕುಮಾರ ಬಿರಾದಾರ, ಸತೀಶ್ ದೇಶಮುಖ, ರಾಜಕುಮಾರ ಪಾಟೀಲ, ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪುರ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.