ಸಂತೋಷ್ ಲಾಡ್
ಬೀದರ್: ‘ನಮ್ಮ ಗ್ಯಾರಂಟಿ ಯೋಜನೆಗಳನ್ನು ಹಿಡಿದುಕೊಂಡು ಪ್ರಧಾನಿ ನರೇಂದ್ರ ಮೋದಿಯವರು ಎಲ್ಲೆಡೆ ಓಡಾಡುತ್ತಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲೂ ನಮ್ಮ ಗ್ಯಾರಂಟಿಗಳನ್ನೇ ಬಳಸುತ್ತಿದ್ದಾರೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ನಗರದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆಯಲ್ಲಿ ಮಹಿಳೆಯರಿಗೆ ಒಂದು ಮತಕ್ಕೆ ಬಿಜೆಪಿಯವರು ₹10 ಸಾವಿರ ಕೊಡುತ್ತಿದ್ದಾರೆ ಎಂದು ತಿಳಿಸಿದರು.
ಆರ್‌ಎಸ್‌ಎಸ್‌ನಲ್ಲಿ ಇದ್ದವರಷ್ಟೇ ದೇಶಭಕ್ತರಲ್ಲ, ಎಲ್ಲರೂ ದೇಶ ಭಕ್ತರೇ ಎಂದ ಸಂತೋಷ್ ಲಾಡ್, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿ ಸಲ ಸಚಿವರಿಗೆ ಡಿನ್ನರ್ ಮೀಟಿಂಗ್ ಕರೆಯುತ್ತಾರೆ. ನಾವು ಹೋಗುತ್ತೇವೆ. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಿಎಂ ಸಭೆಯಲ್ಲಿ ಮಾತನಾಡಿಲ್ಲ. ಒಂದುವೇಳೆ ಸಂಪುಟ ಪುನರ್ ರಚಿಸಬೇಕಾದರೆ ಮುಖ್ಯಮಂತ್ರಿಗೆ ಪೂರ್ಣ ಅಧಿಕಾರ ಇದೆ ಎಂದು ಹೇಳಿದರು.
ನವೆಂಬರ್‌ನಲ್ಲಿ ಕ್ರಾಂತಿಯಾಗುತ್ತದೆ ಎಂದು ಬಿಜೆಪಿ ಹೇಳಿಕೆ ವಿಚಾರ ಪ್ರಸ್ತಾಪಿಸಿದ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಧಾನಿ ಆಗುತ್ತಾರೆ. ಇದರೊಂದಿಗೆ ನವೆಂಬರ್ ಕ್ರಾಂತಿ ಆಗಲಿದೆ. ಗಡ್ಕರಿ ಪ್ರಧಾನಿ ಆಗುತ್ತಾರೆಂಬ ವಿಷಯದ ಕುರಿತು ನಮಗೂ ಕುತೂಹಲ ಇದೆ ಎಂದರು.
ಸಚಿವರಾದ ಈಶ್ವರ ಬಿ. ಖಂಡ್ರೆ, ರಹೀಂ ಖಾನ್ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.