ಚಿಟಗುಪ್ಪ: ‘ಬಡವರ ಸೇವೆಯಿಂದ ಆತ್ಮ ಶಾಂತಿ ಲಭಿಸುತ್ತದೆ’ ಎಂದು ಮುಖ್ಯಶಿಕ್ಷಕ ಇನಾಯತ್ ಪಾಷಾ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಮನ್ನಾಎಖ್ಖೇಳಿ ಗ್ರಾಮದ ಗುರುನಾನಕ ಶಾಲೆಯಿಂದ ಬುಧವಾರ ಗುರುನಾನಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ರೇಷ್ಮಾ ಕೌರ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಣ್ಣು ಹಾಗೂ ಬಟ್ಟೆ ವಿತರಿಸಿ ಮಾತನಾಡಿ,‘ಕೈಲಾದಷ್ಟು ಸಹಾಯ ಮಾಡಿದರೆ ಇನ್ನೊಬ್ಬರಿಗೆ ಅನುಕೂಲವಾಗುತ್ತದೆ’ ಎಂದರು.
ನಂತರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ವಿತರಿಸಲಾಯಿತು.
ಶಾಲೆಯ ಸಿಬ್ಬಂದಿ, ಪಾಲಕರು, ಗಣ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.