ADVERTISEMENT

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ಮಾಹಾಂತೇಶ ಬೀಳಗಿ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2019, 15:22 IST
Last Updated 9 ಏಪ್ರಿಲ್ 2019, 15:22 IST
ಬೀದರ್‌ನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್‌ಎಸ್‌ಎಸ್‌ ಘಟಕದ ವತಿಯಿಂದ ಆಯೋಜಿಸಿದ್ದ ವಿಶೇಷ ಶಿಬಿರದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಮಹಾಂತೇಶ ಬೀಳಗಿ ಮಾತನಾಡಿದರು
ಬೀದರ್‌ನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್‌ಎಸ್‌ಎಸ್‌ ಘಟಕದ ವತಿಯಿಂದ ಆಯೋಜಿಸಿದ್ದ ವಿಶೇಷ ಶಿಬಿರದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಮಹಾಂತೇಶ ಬೀಳಗಿ ಮಾತನಾಡಿದರು   

ಬೀದರ್‌: ‘ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ. ಜೀವ ಜಲ ರಕ್ಷಣೆ ಮಾಡುವ ಜತೆಗೆ ಗಿಡ ಮರಗಳನ್ನು ಬೆಳೆಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮಾಹಾಂತೇಶ ಬೀಳಗಿ ಹೇಳಿದರು.

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಆಶ್ರಯದಲ್ಲಿ ಜನವಾಡ ರಸ್ತೆಯಲ್ಲಿರುವ ಸತ್ಯಗುಡಿಯ ಆವರಣದಲ್ಲಿ ಮಂಗಳವಾರ ಆರಂಭವಾದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಾ. ಸುಚಿತಾನಂದ ಮಲ್ಕಾಪುರೆ ಮಾತನಾಡಿ, ‘ವಿದ್ಯಾರ್ಥಿಗಳು ಉನ್ನತವಾದ ಗುರಿ ಇಟ್ಟುಕೊಳ್ಳಬೇಕು.
ಗುರಿ ಸಾಧಿಸಲು ನಿರಂತರವಾಗಿ ಪ್ರಯತ್ನಿಸಬೇಕು’ ಎಂದು ಹೇಳಿದರು.

ADVERTISEMENT

ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಿಠೋಬಾ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಪ್ರೊ. ರಾಜಪ್ಪ ಬಬಚೇಡಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮ ಅಧಿಕಾರಿ ಪ್ರೊ. ಶ್ರೀನಿವಾಸ ರಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಮನೋಜಕುಮಾರ ನಿರೂಪಿಸಿದರು. ಪ್ರೊ. ಸುಂದರಾಜು ಸ್ವಾಗತಿಸಿದರು. ಭೀಮಶಾ ಬರಗಾಲಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.