ADVERTISEMENT

ಸಂಸ್ಕೃತಿ ಉಳಿಸಿ: ಶಿವಕುಮಾರ ಕಟ್ಟೆ

ಮಹಾತಾಯಿ ಪ್ರಶಸ್ತಿ ಪ್ರದಾನ, ಸಂಗೀತ ನೃತ್ಯ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2021, 16:20 IST
Last Updated 24 ಅಕ್ಟೋಬರ್ 2021, 16:20 IST

ಬೀದರ್: ‘ಆಧುನಿಕ ಯುಗದಲ್ಲಿ ನಶಿಸಿ ಹೋಗುತ್ತಿರುವ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ’ ಎಂದು ಸಾಹಿತಿ ಶಿವಕುಮಾರ ಕಟ್ಟೆ ಹೇಳಿದರು.

ನಗರದ ಮೈಲೂರ್‌ ಕ್ರಾಸ್‌ನಲ್ಲಿರುವ ಕೃಷ್ಣ ದರ್ಶನಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶಾಲಯದ ಸಹಯೋಗದಲ್ಲಿ ಶೋಭಾ ಕಲೆ ಸಾಹಿತ್ಯ, ಸಂಗೀತ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಭಾನುವಾರ ಆಯೋಜಿಸಿದ್ದ ಮಹಾತಾಯಿ ಪ್ರಶಸ್ತಿ ಪ್ರದಾನ, ಸಂಗೀತ ನೃತ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

'ಜಾನಪದ ಕಲಾವಿದ ಶಂಭುಲಿಂಗ ವಾಲ್ದೊಡ್ಡಿ ನೇತೃತ್ವದ ಶೋಭಾ ಕಲೆ ಸಾಹಿತ್ಯ, ಸಂಗೀತ ಮತ್ತು ಸಾಂಸ್ಕೃತಿಕ ಟ್ರಸ್ಟ್ ಹೊಸ ಕಲಾವಿದರಿಗೆ ಪ್ರೋತ್ಸಾಹ ನೀಡುವ ಕೆಲಸವನ್ನು ಮಾಡುತ್ತಿದೆ. ಕಲೆ ಉಳಿಸುವ ದಿಸೆಯಲ್ಲಿ ನಿರಂತರ ಪ್ರಯತ್ನ ನಡೆಸಿದೆ’ ಎಂದು ಹೇಳಿದರು.

ADVERTISEMENT

ಹೋಟೆಲ್ ಉದ್ಯಮಿ ಕೆ. ಗುರುಮೂರ್ತಿ ಮಾತನಾಡಿ, ‘ಶಂಭುಲಿಂಗ ವಾಲ್ದೊಡ್ಡಿ ಅವರು ಮಹಾತಾಯಿ ಪುಸ್ತಕದಲ್ಲಿ ಮಡದಿಯ ಪ್ರೀತಿ, ಪತಿ ಪತ್ನಿಯರ ಸಂಬಂಧ ಬಗ್ಗೆ ಮಾರ್ಮಿಕವಾಗಿ ಬರೆದಿದ್ದಾರೆ’ ಎಂದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಎಸ್. ಗೀತಾ ಗಡ್ಡಿ, ಗುಲಬುರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ ಸದಸ್ಯೆ ಪ್ರತಿಭಾ ಚಾಮಾ, ಸಾಹಿತಿ ಇಂದುಮತಿ ಸುತಾರ ಮಾತನಾಡಿದರು. ಸಾಹಿತಿ ಸಾಧನಾ ರಂಜೋಳಕರ್ ಅವರಿಗೆ ಮಹಾತಾಯಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಚಂದ್ರಪ್ಪ ಹೆಬ್ಬಾಳಕರ್, ಸಂಜೀವಕುಮಾರ ಅತಿವಾಳೆ, ವಿಜಯಕುಮಾರ ಸೋನಾರೆ, ಟ್ರಸ್ಟ್‌ ಅಧ್ಯಕ್ಷ ಶಂಭುಲಿಂಗ ವಾಲ್ದೊಡ್ಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಭಾನುಪ್ರೀಯಾ ಅರಳಿ ಪ್ರಾರ್ಥನೆ ಗೀತೆ ಹಾಡಿದರು, ಮಹೇಶ ಗೋರನಾಳಕರ್ ನಿರೂಪಿಸಿದರು. ಸತೀಶ ವಾಲ್ದೊಡ್ಡಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.