ADVERTISEMENT

‘ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ’

ಹಂದಿಕೇರಾ : ಸರ್ಕಾರಿ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2020, 10:26 IST
Last Updated 18 ಫೆಬ್ರುವರಿ 2020, 10:26 IST
ಹುಮನಾಬಾದ್‍ನ ಹಂದಿಕೇರಾ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಶಾಲಾ ವಾರ್ಷಿಕೋತ್ಸವವನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಡಾ.ಪ್ರಕಾಶ ಪಾಟೀಲ ಉದ್ಘಾಟಿಸಿದರು
ಹುಮನಾಬಾದ್‍ನ ಹಂದಿಕೇರಾ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಶಾಲಾ ವಾರ್ಷಿಕೋತ್ಸವವನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಡಾ.ಪ್ರಕಾಶ ಪಾಟೀಲ ಉದ್ಘಾಟಿಸಿದರು   

ಹುಮನಾಬಾದ: ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ನೀಡಿದಾಗ ಮಾತ್ರ ಮಕ್ಕಳ ಉಜ್ವಲ ಭವಿಷ್ಯ ರೂಪಗೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಡಾ.ಪ್ರಕಾಶ ಪಾಟೀಲ ಹೇಳಿದರು.

ತಾಲ್ಲೂಕಿನ ಹಂದಿಕೇರಾ ಗ್ರಾಮ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗಾಗಿ ಹಲವಾರು ಯೋಜನೆಗಳು ಜಾರಿಗೆ ತಂದಿದೆ. ಈ ಶಾಲೆಯಲ್ಲಿ ಇಂಗ್ಲಿಷ್‌ ಮಾಧ್ಯಮ ಪ್ರಾರಂಭ ಮಾಡಿದ್ದು, ಮಕ್ಕಳು ಇದರ ಸದುಪಯೋಗ ಪಡೆದು ಒಳ್ಳೆಯ ಶಿಕ್ಷಣ ಕಲಿಯಬೇಕು ಎಂದು ಕರೆ ನೀಡಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಸದಸ್ಯ ಜಮೀರಮಿಯ್ಯ, ಹಿರಿಯ ಮುಖಂಡ ಗೋವಿಂದರಾವ್ ಜೇಡೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ರವೀಂದ್ರ ರೆಡ್ಡಿ ಮಾಲಿಪಾಟೀಲ, ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಮುರುಗೇಂದ್ರ ಸಜ್ಜನಶೆಟ್ಟಿ, ಮುಖ್ಯಗುರು ಶ್ರೀಕಾಂತ ಸೂಗಿ, ಸಿಆರ್‌ಪಿಗಳಾದ ಪಂಡಿತ, ಶಂಭುಲಿಂಗ ರೂಗನ, ಗುಂಡಪ್ಪಾ ಮಣಕೋಜೆ ಗ್ರಾಮ ಪಂಚಾಯಿತ ಸದಸ್ಯರಾದ ದೀಲಿಪ ಸಾಠೆ, ಉಮೇಶ ಕರ್ನಾಗೆ ಶಿಕ್ಷಕರಾದ ಗಣೇಶ ಮತ್ತು ಲಕ್ಷ್ಮಣ ಇದ್ದರು.

ಗೋವಿಂದ ಭಂಡಾರೆ ಸ್ವಾಗತಿಸಿದರು. ಮುಖ್ಯಗುರು ಬಸವರಾಜ ಬಣಕಾರ ನಿರೂಪಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.