ADVERTISEMENT

ಔರಾದ್: ಶಾಲಾ ಬಸ್ ಹರಿದು ವಿದ್ಯಾರ್ಥಿನಿ ಸಾವು

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2025, 14:42 IST
Last Updated 4 ಸೆಪ್ಟೆಂಬರ್ 2025, 14:42 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಔರಾದ್ (ಬೀದರ್‌ ಜಿಲ್ಲೆ): ತಾಲ್ಲೂಕಿನ ಎಕಂಬಾ ಗ್ರಾಮದಲ್ಲಿ ಶಾಲಾ ಬಸ್ ಹಾಯ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ADVERTISEMENT

ಕಾವೇರಿ ಆಕಾಶ (06) ಮೃತ ವಿದ್ಯಾರ್ಥಿನಿ.

ಎಕಂಬಾದ ಸೇಂಟ್ ಪಾಲ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಓದುತ್ತಿದ್ದ ಈ ವಿದ್ಯಾರ್ಥಿನಿ ಬೆಳಿಗ್ಗೆ ಎಂದಿನಂತೆ ಬಸ್‌ನಲ್ಲಿ ಶಾಲೆಗೆ ಹೋಗಿದ್ದಾಳೆ. ಶಾಲಾ ಆವರಣದಲ್ಲಿ ಇಳಿಯುವಾಗ ಬಿದ್ದು ಅದೇ ಬಸ್ ಮೇಲಿಂದ ಹರಿದು ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಔರಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.