ಭಾಲ್ಕಿ: ತಾಲ್ಲೂಕಿನ ಡೋಣಗಾಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಸುಮಾರು 20 ಸಾವಿರ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ.
ಶನಿವಾರ ರಾತ್ರಿ ಇಲ್ಲವೇ ಭಾನುವಾರದ ರಾತ್ರಿ ಕಳ್ಳತನ ನಡೆದಿದ್ದು, ಶಾಲೆಯಲ್ಲಿನ ಬಿಸಿಯೂಟದ ಎರಡು ಗ್ಯಾಸ್ ಸಿಲಿಂಡರ್, ಎರಡು ಭೋಗೋಣಿ, ಗ್ಲಾಸ್ ಸೇರಿದಂತೆ ಅಂದಾಜು ಇಪ್ಪತ್ತು ಸಾವಿರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ.
ಈ ಸಂಬಂಧ ಮುಖ್ಯಶಿಕ್ಷಕ ನೀಡಿದ ದೂರನ ಮೇರೆಗೆ ಪಟ್ಟಣದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ ಐ ಅಶೋಕ ಪಾಟೀಲ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.