ಹುಮನಾಬಾದ್: ಪಟ್ಟಣದ ಸೇರಿದಂತೆ ತಾಲ್ಲೂಕಿನಾದ್ಯಂತ ಶನಿವಾರ ಮಳೆ ಸುರಿಯಿತು. ತಾಲ್ಲೂಕಿನ ಜಲಸಂಗಿ ಗ್ರಾಮದಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯ ಗೋಡೆ ಕುಸಿದು ಬಿದ್ದಿದೆ.
ಚಿಟಗುಪ್ಪ ಮತ್ತು ಹುಮನಾಬಾದ್ ತಾಲ್ಲೂಕಿನಲ್ಲಿ ದಿನಪೂರ್ತಿ ಮೋಡಕವಿದ ವಾತಾವರಣವಿತ್ತು. ಕೆಲ ಹೊತ್ತು ಜೋರಾಗಿ ಮಳೆ ಬಂದರೆ ಇನ್ನೂ ಕೆಲ ಸಮಯ ಜಿಟಿಜಿಟಿಯಾಗಿ ಮಳೆ ಸುರಿಯಿತು.
ಮುಂಗಾರು ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕು ಪಡೆದುಕೊಂಡಿವೆ. ಗ್ರಾಮೀಣ ಪ್ರದೇಶಗಳಿಂದ ಹುಮನಾಬಾದ್ ಮತ್ತು ಚಿಟಗುಪ್ಪ ಪಟ್ಟಣಕ್ಕೆ ಬಂದ ಜನ, ವಿದ್ಯಾರ್ಥಿಗಳು ಮತ್ತು ದ್ವಿಚಕ್ರ ವಾಹನಗಳ ಸವಾರರು ಮಳೆಯಲ್ಲಿ ನೆಂದುಕೊಂಡೇ ತಮ್ಮ ದೈನಂದಿನ ಕೆಲಸಗಳನ್ನು ಮಾಡಬೇಕಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.