ಬೀದರ್: ಜಿಲ್ಲೆಯಲ್ಲಿ ಖಾಸಗಿ ಶಾಲೆಗಳು ಇನ್ನೂ ತೆರೆದುಕೊಂಡಿಲ್ಲ. ಆದರೆ, ಸರ್ಕಾರಿ ಶಾಲಾ ಶಿಕ್ಷಕರು ಮಾತ್ರ ವಠಾರ ಶಾಲೆಗಳನ್ನು ನಡೆಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಈ ಬಾರಿ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಗಿದೆ.
ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಪಾಠ ಬೋಧನೆ ಮಾಡಲಾಗುತ್ತಿದೆ. ಶಿಕ್ಷಕರು ಮನೆಯಿಂದಲೇ ಮಕ್ಕಳಿಗೆ ಪಾಠ ಹೇಳಿ ಕೊಡುತ್ತಿದ್ದಾರೆ. ಪ್ರಾಥಮಿಕ ಶಾಲೆಗಳು ಮಾತ್ರ ಈವರೆಗೂ ತೆರೆದುಕೊಂಡಿಲ್ಲ. ಶಾಲೆ ಆರಂಭವಾಗದ ಕಾರಣ ಶಿಕ್ಷಣ ಸಂಸ್ಥೆಗಳು ಅನೇಕ ಶಿಕ್ಷಕರಿಗೆ ಪೂರ್ಣ ಪ್ರಮಾಣದಲ್ಲಿ ವೇತನವನ್ನೂ ಪಾವತಿಸುತ್ತಿಲ್ಲ.
ಖಾಸಗಿ ಶಾಲೆಗಳನ್ನು ಆರಂಭಿಸಲು ಸರ್ಕಾರದಿಂದ ಇನ್ನೂ ಆದೇಶ ಬಂದಿಲ್ಲ. ಆದೇಶ ಬಂದ ತಕ್ಷಣ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.