ADVERTISEMENT

ಕನ್ನಡ ಸಾಹಿತ್ಯ ಸಂಘದಲ್ಲಿ ವಿಜ್ಞಾನ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2022, 14:21 IST
Last Updated 5 ಸೆಪ್ಟೆಂಬರ್ 2022, 14:21 IST
ಬೀದರ್‌ನ ಕರ್ನಾಟಕ ಸಾಹಿತ್ಯ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎ.ಎಂ. ರಮೇಶ ಅವರನ್ನು ಸನ್ಮಾನಿಸಲಾಯಿತು
ಬೀದರ್‌ನ ಕರ್ನಾಟಕ ಸಾಹಿತ್ಯ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎ.ಎಂ. ರಮೇಶ ಅವರನ್ನು ಸನ್ಮಾನಿಸಲಾಯಿತು   

ಬೀದರ್: ‘ಸಾಹಿತ್ಯದ ಮೂಲಕ ವಿಜ್ಞಾನ ಬೆಳೆಸುವ ದಿಸೆಯಲ್ಲಿ 2023ರ ಫೆಬ್ರುವರಿಯಲ್ಲಿ ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಅಕಾಡೆಮಿಯ ಅನುದಾನದಿಂದ ವಿಜ್ಞಾನ ದಿನ ಆಚರಿಸಲಾಗುವುದು’ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಿಇಒ ಎ.ಎಂ. ರಮೇಶ ತಿಳಿಸಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘಕ್ಕೆ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಸಾಹಿತ್ಯ ಚಟುವಟಿಕೆಗಳ ಬಗ್ಗೆ ಅರಿತು ಪ್ರಶಂಸೆ ವ್ಯಕ್ತಪಡಿಸಿ ಅವರು ಮಾತನಾಡಿದರು.

‘ವಿಜ್ಞಾನ ಕುರಿತು ಹೆಚ್ಚಿನ ಸಾಹಿತ್ಯ ಹೊರಬಂದರೆ ಯುವ ಪೀಳಿಗೆಗೆ ಸದುಪಯೋಗವಾಗಲಿದೆ’ ಎಂದರು.

ADVERTISEMENT

ನಿವೃತ್ತ ಕುಲಪತಿ ಪ್ರೊ.ಬಿ.ಜಿ. ಮೂಲಿಮನಿ ಮಾತನಾಡಿ, ‘ವಿಜ್ಞಾನದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಇಂದಿನ ಯುವ ಪೀಳಿಗೆಗೆ ಪ್ರೇರಣೆ ನೀಡಬೇಕು’ ಎಂದು ಹೇಳಿದರು.

ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಎ.ಎಂ.ರಮೇಶ, ವಿಶ್ರಾಂತ ಕುಲಪತಿ ಪ್ರೊ. ಬಿ.ಜಿ.ಮೂಲಿಮನಿ ಹಾಗೂ ಅಕಾಡೆಮಿ ಆಡಳಿತಾಧಿಕಾರಿ ಮಹಾದೇವೇಗೌಡ ಅವರನ್ನು ಸನ್ಮಾನಿಸಲಾಯಿತು.

ಕರ್ನಾಟಕ ಕಾಲೇಜಿನ ರಾಜೇಂದ್ರ ಬಿರಾದಾರ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಸಂಯೋಜಕ ರಾಜಕುಮಾರ ಹೆಬ್ಬಾಳೆ, ಕಾರ್ಯದರ್ಶಿ ಸುನೀತಾ ಕೂಡ್ಲಿಕರ್, ಮಹಾನಂದ ಮಡಕಿ, ಶಿವಶರಣಪ್ಪ ಗಣೇಶಪೂರ, ಪ್ರಕಾಶ ಕನ್ನಾಳೆ, ಉಮಾಕಾಂತ, ಶಿವಕುಮಾರ ಹಾಗೂ ಪರಮೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.