ADVERTISEMENT

ಬೀದರ್ | ವೈಜ್ಞಾನಿಕ ಹೈನುಗಾರಿಕೆ: ರೈತರಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2021, 9:44 IST
Last Updated 25 ಡಿಸೆಂಬರ್ 2021, 9:44 IST
ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ ಗ್ರಾಮದ ಜಾನುವಾರು ಸಂಶೋಧನೆ ಹಾಗೂ ಮಾಹಿತಿ ಕೇಂದ್ರ(ದೇವಣಿ)ದಲ್ಲಿ ರಾಷ್ಟ್ರೀಯ ಕೃಷಿಕರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೈಜ್ಞಾನಿಕ ಹೈನುಗಾರಿಕೆ ಪದ್ಧತಿಗಳ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು
ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ ಗ್ರಾಮದ ಜಾನುವಾರು ಸಂಶೋಧನೆ ಹಾಗೂ ಮಾಹಿತಿ ಕೇಂದ್ರ(ದೇವಣಿ)ದಲ್ಲಿ ರಾಷ್ಟ್ರೀಯ ಕೃಷಿಕರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೈಜ್ಞಾನಿಕ ಹೈನುಗಾರಿಕೆ ಪದ್ಧತಿಗಳ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು   

ಬೀದರ್: ರೈತರು ವೈಜ್ಞಾನಿಕ ಹೈನುಗಾರಿಕೆ ಪದ್ಧತಿ ಅನುಸರಿಸಬೇಕು ಎಂದು ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಎಚ್.ಡಿ. ನಾರಾಯಣಸ್ವಾಮಿ ಸಲಹೆ ಮಾಡಿದರು.

ಭಾಲ್ಕಿ ತಾಲ್ಲೂಕಿನ ತಟ್ಟಿತೂಗಾಂವ ಸಮೀಪದ ಜಾನುವಾರು ಸಂಶೋಧನೆ ಹಾಗೂ ಮಾಹಿತಿ ಕೇಂದ್ರ(ದೇವಣಿ)ದಲ್ಲಿ ರಾಷ್ಟ್ರೀಯ ಕೃಷಿಕರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ದೇವಣಿ ತಳಿ ಜಾನುವಾರುಗಳ ಪ್ರದರ್ಶನ ಹಾಗೂ ವೈಜ್ಞಾನಿಕ ಹೈನುಗಾರಿಕೆ ಪದ್ಧತಿಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೈನುಗಾರಿಕೆಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳುವುದರಿಂದ ಹೆಚ್ಚು ಆದಾಯ ಪಡೆಯಬಹುದು ಎಂದು ತಿಳಿಸಿದರು.

ADVERTISEMENT

ದೇವಣಿ ತಳಿ ಜಾನುವಾರುಗಳ ಪ್ರದರ್ಶನ ನಡೆಯಿತು. ಬಂಧನ ಮುಕ್ತ ಕೊಟ್ಟಿಗೆ, ಎರೆಹುಳು ಗೊಬ್ಬರ ತಯಾರಿಕೆ, ಮೇವು ಕತ್ತರಿಸುವಿಕೆ, ಸಮತೋಲನ ಪಶು ಆಹಾರ, ಮೇವು ಬೆಳೆಗಳು, ರಸ ಮೇವು ತಯಾರಿಕೆಯಂಥ ವಿವಿಧ ಬಗೆಯ ವೈಜ್ಞಾನಿಕ ಹೈನುಗಾರಿಕೆ ಪದ್ಧತಿಗಳ ಪ್ರಾತ್ಯಕ್ಷಿಕೆ ನೀಡಲಾಯಿತು.

ಕೇಂದ್ರದ ಮುಖ್ಯಸ್ಥ ಡಾ. ಪ್ರಕಾಶಕುಮಾರ ರಾಠೋಡ್, ವಿಶ್ವವಿದ್ಯಾಲಯ, ಕೇಂದ್ರದ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಪರಿಶಿಷ್ಟ ಜಾತಿ ಉಪ ಯೋಜನೆ ಅಡಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.