ADVERTISEMENT

ಸ್ವಯಂ ಪ್ರೇರಿತವಾಗಿ ಕೋವಿಡ್ ಡೋಸ್ ಪಡೆಯಿರಿ: ಸಚಿವ ಚವಾಣ್

​ಪ್ರಜಾವಾಣಿ ವಾರ್ತೆ
Published 9 ಜನವರಿ 2022, 14:06 IST
Last Updated 9 ಜನವರಿ 2022, 14:06 IST
ಪ್ರಭು ಚವಾಣ್
ಪ್ರಭು ಚವಾಣ್   

ಬೀದರ್: ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಪ್ರತಿಬಂಧಕ ಲಸಿಕೆ ನೀಡುವ ಕಾರ್ಯಕ್ರಮ ಜನವರಿ 10ರಿಂದ ಆರಂಭವಾಗಲಿದೆ. ಎಲ್ಲರೂ ಸ್ವಯಂ ಪ್ರೇರಿತವಾಗಿ ಕೋವಿಡ್ ಡೋಸ್ ಪಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ತಿಳಿಸಿದ್ದಾರೆ.

ರೋಗಿಗಳ ಪ್ರಾಣ ಉಳಿಸಲು ತಮ್ಮ ಜೀವವನ್ನು ಪಣಕಿಟ್ಟು ಹಗಲಿರುಳು ಶ್ರಮಿಸುವ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರ ಹಿತ ಕಾಪಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.