ಔರಾದ್: ‘ಪತ್ರಕರ್ತರ ಕೆಲಸ ಸಾಮಾನ್ಯ ಅಲ್ಲ. ವಿಷಯನ್ನು ಸೂಕ್ಷ್ಮವಾಗಿ ಗ್ರಹಿಸಿ ಸುದ್ದಿ ಮಾಡಬೇಕಾಗುತ್ತದೆ’ ಎಂದು ಸಿಪಿಐ ರಘುವೀರಸಿಂಗ್ ಠಾಕೂರ್ ಹೇಳಿದರು.
ತಾಲ್ಲೂಕಿನ ಸಂತಪುರ ಸಿದ್ಧರಾಮೇಶ್ವರ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಅಪರಾಧ ವಿಷಯದಲ್ಲಿ ಸಾಕಷ್ಟು ಬಾರಿ ಕಳ್ಳತನ ಯಾವುದು, ದರೋಡೆ ಯಾವುದು ಎಂಬ ಸ್ಪಷ್ಟ ಉಲ್ಲೇಖ ಇರುವುದಿಲ್ಲ. ಹೀಗಾಗಿ ಇಂತಹ ವಿಷಯದಲ್ಲಿ ಪತ್ರಕರ್ತರು ಸರಿಯಾಗಿ ತಿಳಿದು ಬರೆಯಬೇಕು’ ಎಂದು ಸಲಹೆ ನೀಡಿದರು.
ಮಾನವ ಕಳ್ಳಸಾಗಣೆ ಕುರಿತು ಮಾತನಾಡಿದ ಅವರು ‘ಯುವತಿಯರು ಈ ವಿಷಯದಲ್ಲಿ ಹೆಚ್ಚಿನ ಜಾಗೃತಿ ವಹಿಸಬೇಕು. ಪ್ರೀತಿ, ಮದುವೆ, ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವಂತೆ ಮಾಡಲಾಗುತ್ತದೆ’ ಎಂದು ಹೇಳಿದರು.
ಜಾನಪದ ಪರಿಷತ್ ತಾಲ್ಲೂಕು ಅಧ್ಯಕ್ಷ ಸಂಜೀವಕುಮಾರ ಜುಮ್ಮಾ, ಪತ್ರಕರ್ತ ಮನ್ಮಥಪ್ಪ ಸ್ವಾಮಿ, ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಮಾತನಾಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ, ಪ್ರಾಂಶುಪಾಲ ಗುರುಪ್ರೀತ್ ಕೌರ್, ಮುಖ್ಯ ಗುರು ಶಿವಕುಮಾರ್ ಹಿರೇಮಠ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಧನರಾಜ್ ಮುಸ್ತಾಪುರ, ಸಂಜು, ಶರಣಪ್ಪ ಚಿಟಮೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.