ADVERTISEMENT

ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿ- ಸಚಿವ ಪ್ರಭು ಚವಾಣ್

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2022, 13:25 IST
Last Updated 13 ಮಾರ್ಚ್ 2022, 13:25 IST
ಪ್ರಭು ಚವಾಣ್‌
ಪ್ರಭು ಚವಾಣ್‌   

ಬೀದರ್: ‘ಅಲೆದಾಟ ಬೇಕಿಲ್ಲ. ಇಂದು, ನಾಳೆ ಎಂಬ ಸುತ್ತಾಟವಿಲ್ಲ. ಕಂದಾಯ ದಾಖಲೆಗಳು ಮನೆ ಬಾಗಿಲಿಗೆ' ಎನ್ನುವ ವಿನೂತನ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ. ಚವಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಯೋಜನೆಯಡಿ ರೈತರಿಗೆ ದಾಖಲೆಗಳನ್ನು ಉಚಿತವಾಗಿ ಕೊಡಲಾಗುತ್ತಿದೆ. ರೈತರು ಕಡ್ಡಾಯವಾಗಿ ತಮ್ಮ ಜಮೀನಿನ ದಾಖಲೆ ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಂದಾಯ ದಾಖಲೆಗಳಾದ ಪಹಣಿ, ಜಾತಿ, ಆದಾಯ ಇತ್ಯಾದಿ ಪ್ರಮಾಣ ಪತ್ರಗಳನ್ನು ಸರ್ಕಾರದ ವತಿಯಿಂದಲೇ ಉಚಿತವಾಗಿ ವಿತರಿಸುವ ಮೂಲಕ ಜನಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಕಂದಾಯ ದಾಖಲೆ ಪಡೆಯಲು ಕಷ್ಟವಾಗುತ್ತಿದೆ ಎಂಬ ಜನರ ದೂರಿನ ಕಾರಣ ಸರ್ಕಾರ ಯೋಜನೆ ಜಾರಿಗೊಳಿಸಿದೆ. ಅಧಿಕಾರಿಗಳು ಯಾವುದೇ ಕಾರಣಕ್ಕೂ ಸಬೂಬು ಹೇಳದೆ, ಜನರಿಗೆ ಸಕಾಲದಲ್ಲಿ ದಾಖಲೆಗಳನ್ನು ಕೊಡಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.