ADVERTISEMENT

ಕಬ್ಬಿಗೆ ₹ 3 ಸಾವಿರ ಬೆಲೆ ನಿಗದಿಪಡಿಸಿ

ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 15:46 IST
Last Updated 3 ನವೆಂಬರ್ 2020, 15:46 IST
ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರ ಸಭೆ ಕರೆದು ಕಬ್ಬು ಬೆಲೆ ನಿಗದಿಪಡಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್‍ನಲ್ಲಿ ಶಿರಸ್ತೆದಾರ ಪ್ರೇಮದಾಸ ಅವರಿಗೆ ಸಲ್ಲಿಸಿದರು

ಬೀದರ್: ಪ್ರಸಕ್ತ ವರ್ಷ ಪ್ರತಿ ಟನ್ ಕಬ್ಬಿಗೆ ₹ 3 ಸಾವಿರ ಬೆಲೆ ನಿಗದಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ (ಪುಟ್ಟಣ್ಣಯ್ಯ ಬಣ) ಒತ್ತಾಯಿಸಿದೆ.

ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಅವರ ನೇತೃತ್ವದಲ್ಲಿ ನಗರದಲ್ಲಿ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಸಿರಸ್ತೆದಾರ ಪ್ರೇಮದಾಸ ಅವರಿಗೆ ಸಲ್ಲಿಸಿದರು.

ಈ ವರ್ಷವೂ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರ ಸಭೆ ನಡೆಸಿ ಕಬ್ಬು ಬೆಲೆ ನಿಗದಿಪಡಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಹೊಲಗಳಲ್ಲಿ ವಾಸವಾಗಿರುವ ರೈತರಿಗೆ ಸಿಂಗಲ್ ಫೇಸ್ ವಿದ್ಯುತ್ ಕೊಡಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಎಕರೆಗೆ ₹ 25 ಸಾವಿರ ವಿಮೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಕಬ್ಬು ಕಟಾವು ಹಾಗೂ ಕಬ್ಬು ಲಾರಿಗಳನ್ನು ತಡೆ ಹಿಡಿಯಲಾಗುವುದು ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.