ಕಮಲನಗರ: ತಾಲ್ಲೂಕಿನ ಸೋನಾಳ ಗ್ರಾಮದಲ್ಲಿಯ ಚರಂಡಿಗಳಲ್ಲಿ ಹೂಳು ತುಂಬಿಕೊಂಡು ನೀರು ಸರಾಗವಾಗಿ ಹರಿದು ಹೋಗದೆ ಕೊಳಚೆ ನೀರು ನಿಂತುಕೊಂಡು ದುರ್ವಾಸನೆ ಬೀರುತ್ತಿದೆ. ಇದರಿಂದ ನಿವಾಸಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.
ಚರಂಡಿಯಲ್ಲಿ ಕಸ ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಹೂಳು ತುಂಬಿಕೊಂಡು ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಅಲ್ಲದೆ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿರುವ ಕಾರಣ ಸಾರ್ವಜನಿಕರು ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ಬದುಕುತ್ತಿದ್ದಾರೆ.
ಗ್ರಾಮ ಪಂಚಾಯಿತಿಯಿಂದ ಸುಮಾರು ನಾಲ್ಕು ತಿಂಗಳಿಂದ ಚರಂಡಿ ಸ್ವಚ್ಛಗೊಳಿಸಿಲ್ಲ. ಚರಂಡಿ ಬಳಿ ಮೂಗು ಮುಚ್ಚಿಕೊಂಡು ತಿರುಗಾಡುವ ಸ್ಥಿತಿ ನಿರ್ಮಾಣವಾಗಿದೆ. ರಾತ್ರಿ ವೇಳೆಯಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿದೆ. ಕೂಡಲೇ ಸಂಬಂಧಿತ ಅಧಿಕಾರಿಗಳು ಇತ್ತ ಗಮನ ಹರಿಸಿ ಚರಂಡಿಯಲ್ಲಿ ತುಂಬಿರುವ ಹೂಳನ್ನು ತೆಗೆಸಿ ಸಮಸ್ಯೆಗಳಿಗೆ ಮುಕ್ತಿ ನೀಡಬೇಕು ಎಂದು ಗ್ರಾಮಸ್ಥರಾದ ಸುನೀತಾ ಬಿರಾದಾರ, ಬಸವರಾಜ ಇಸರಣ್ಣಾ, ಗಣಪತಿ ಮಂಡಗೆ, ಸಂಗಮೇಶ ಹಣಮಶೇಟ್ಟೆ ಆಗ್ರಹಿಸಿದ್ದಾರೆ.
ಸೋನಾಳ ಗ್ರಾಮದ ಚರಂಡಿಗಳಲ್ಲಿ ಹೂಳು ತುಂಬಿಕೊಂಡು ನಾರುತ್ತಿದೆ. ಸೊಳ್ಳೆಗಳ ಆಶ್ರಯವಾಗಿದೆ. ಕೂಡಲೇ ಅಧಿಕಾರಿಗಳು ಹೂಳು ತೆಗೆಸಿ ಸಮಸ್ಯೆ ಬಗೆಹರಿಸಬೇಕುಅಂಕೋಶ ಹಣಮಶೆಟ್ಟೆ, ಗ್ರಾ.ಪಂ. ಮಾಜಿ ಸದಸ್ಯ
ಚರಂಡಿಯಲ್ಲಿ ಹೂಳು ತುಂಬಿಕೊಂಡಿರುವ ಬಗ್ಗೆ ಗಮನಕ್ಕೆ ಬಂದಿದ್ದು ಕೂಡಲೇ ಚರಂಡಿ ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಲಾಗುವುದುಮಲ್ಲೇಶ ಬೇಲ್ದಾರ, ಪಿಡಿಒ, ಸೋನಾಳ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.