ADVERTISEMENT

ಲೈಂಗಿಕ ದೌರ್ಜನ್ಯ ಆರೋಪ: ಶಾಸಕ ಪ್ರಭು ಚವಾಣ್‌ ಮಗನಿಗಾಗಿ ಪೊಲೀಸರ ಹುಡುಕಾಟ

​ಪ್ರಜಾವಾಣಿ ವಾರ್ತೆ
Published 23 ಜುಲೈ 2025, 9:17 IST
Last Updated 23 ಜುಲೈ 2025, 9:17 IST
   

ಬೀದರ್‌: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಔರಾದ್‌ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಭು ಚವಾಣ್‌ ಅವರ ಮಗ ಪ್ರತೀಕ್‌ ಚವಾಣ್‌ ಅವರ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.

ಇದಕ್ಕಾಗಿ ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಹಾಗೂ ಮಹಿಳಾ ಠಾಣೆಯ ಸಿಪಿಐ ರಾಮಪ್ಪ ಸಾವಳಗಿ ಅವರ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಲಾಗಿದೆ.

‘ನಮ್ಮ ಪೊಲೀಸರು ಪ್ರತೀಕ್‌ ಚವಾಣ್‌ ಅವರ ಮನೆಗೆ ಹೋಗಿದ್ದರು. ಈ ವೇಳೆ ಪ್ರತೀಕ್ ಚವಾಣ್‌ ಮನೆಯಲ್ಲಿ ಇರಲಿಲ್ಲ. ಅವರ ಮೊಬೈಲ್‌ ಕೂಡ ಸ್ವಿಚ್‌ ಆಫ್‌ ಆಗಿದೆ. ಅವರ ಹುಡುಕಾಟಕ್ಕೆ ಪೊಲೀಸರನ್ನು ಅನ್ಯ ರಾಜ್ಯಕ್ಕೆ ಕಳಿಸಿಕೊಡಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ADVERTISEMENT

‘ಮದುವೆಯಾಗುವುದಾಗಿ ನಂಬಿಸಿ ನಿಶ್ಚಿತಾರ್ಥ ಮಾಡಿಕೊಂಡು, ವಿವಿಧ ಸ್ಥಳಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಮಹಾರಾಷ್ಟ್ರದ ಯುವತಿಯೊಬ್ಬರು ಶಾಸಕ ಪ್ರಭು ಚವಾಣ್‌ ಅವರ ಮಗ ಪ್ರತೀಕ್‌ ಚವಾಣ್‌ ವಿರುದ್ಧ ಜುಲೈ 20ರಂದು ಮಹಿಳಾ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು. ಇವರ ದೂರು ಆಧರಿಸಿ ಪ್ರತೀಕ್‌ ಚವಾಣ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದಕ್ಕೂ ಮುನ್ನ ಯುವತಿ, ಬೆಂಗಳೂರಿನಲ್ಲಿ ಗೃಹಸಚಿವರು ಹಾಗೂ ರಾಜ್ಯ ಮಹಿಳಾ ಆಯೋಗಕ್ಕೂ ದೂರು ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.