ADVERTISEMENT

ಲೈಂಗಿಕ ದೌರ್ಜನ್ಯ ಆರೋಪ: ಶಾಸಕ ಚವಾಣ್ ಮಗನ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 14:20 IST
Last Updated 20 ಜುಲೈ 2025, 14:20 IST
<div class="paragraphs"><p>ಲೈಂಗಿಕ ದೌರ್ಜನ್ಯ –‍ಪ್ರಾತಿನಿಧಿಕ ಚಿತ್ರ</p></div>

ಲೈಂಗಿಕ ದೌರ್ಜನ್ಯ –‍ಪ್ರಾತಿನಿಧಿಕ ಚಿತ್ರ

   

ಬೀದರ್: ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಔರಾದ್ ಕ್ಷೇತ್ರದ ಶಾಸಕ ಪ್ರಭು ಚವಾಣ್ ಅವರ ಮಗ ಪ್ರತೀಕ್ ಚವಾಣ್ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರದ ಉದಗೀರ್ ಸಮೀಪದ ಹಣೆಗಾಂವ್ ತಾಂಡಾದ ಯುವತಿ ಸಂಧ್ಯಾ ನಾಮದೇವ್ ರಾಠೋಡ್ ಅವರು ನೀಡಿದ ದೂರಿನನ್ವಯ ಕೇಸ್ ದಾಖಲಾಗಿದೆ.

ADVERTISEMENT

2023ರ ಡಿಸೆಂಬರ್ 25ರಂದು ಔರಾದ್ ತಾಲ್ಲೂಕಿನ ಘಮಸುಬಾಯಿ ಬೊಂತಿ ತಾಂಡಾದಲ್ಲಿ ಶಾಸಕ ಪ್ರಭು ಚವಾಣ್ ಅವರ ಪುತ್ರ ಪ್ರತೀಕ್ ಜತೆ ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥವಾಗಿದೆ. ನಂತರ ಇಬ್ಬರೂ ನಾನಾ ಕಡೆ ಸುತ್ತಾಡಿದ್ದೇವೆ. ಈ ವೇಳೆ ಪ್ರತೀಕ್ ನನ್ನ ಮೇಲೆ ಬಲವಂತದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.