ADVERTISEMENT

ಹುಮನಾಬಾದ್ | ಬಾಲಕಿಗೆ ಲೈಂಗಿಕ ಕಿರುಕುಳ: ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 12 ಮೇ 2023, 7:53 IST
Last Updated 12 ಮೇ 2023, 7:53 IST

ಹುಮನಾಬಾದ್: ಜನರಲ್ ಸ್ಟೋರ್ ಮಾಲೀಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಗುರುವಾರ ಪೋಕ್ಸೊ ಪ್ರಕರಣ ದಾಖಲಾಗಿದೆ.

ಪಟ್ಟಣದ ಜೆ.ಕೆ. ಜನರಲ್ ಸ್ಟೋರ್‌ನಲ್ಲಿ ವಿದ್ಯುತ್ ದೀಪ ಖರೀದಿಗಾಗಿ ಹೋಗಿದ್ದ, ಸಂದರ್ಭದಲ್ಲಿ 13 ವರ್ಷದ ಬಾಲಕಿಗೆ ಸ್ಟೋರ್ ಮಾಲೀಕ ಅಬ್ದುಲ್ ಗಫಾರ್ (45) ಎಂಬಾತ ಲೈಂಗಿಕ ಕಿರುಕುಳಕ್ಕೆ ಯತ್ನಿಸುತ್ತಿದ್ದ ಎಂದು ಪೋಷಕರು ದೂರು ನೀಡಿದ್ದಾರೆ.

ಪೋಷಕರು ನೀಡಿದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಈ ಕುರಿತು ಹುಮನಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.