ADVERTISEMENT

ಬೀದರ್: ನಿರ್ಗತಿಕರಿಗೆ ಹೊದಿಕೆ ವಿತರಿಸಿದ ಶಾಹೀನ್ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 6 ಜನವರಿ 2022, 16:16 IST
Last Updated 6 ಜನವರಿ 2022, 16:16 IST
ಬೀದರ್‌ನ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಒಳ ರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಡ ರೋಗಿಗಳಿಗೆ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳು ಹೊದಿಕೆ ವಿತರಿಸಿದರು
ಬೀದರ್‌ನ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಒಳ ರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಡ ರೋಗಿಗಳಿಗೆ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳು ಹೊದಿಕೆ ವಿತರಿಸಿದರು   

ಬೀದರ್: ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳು ನಗರದಲ್ಲಿ ನಿರ್ಗತಿಕರಿಗೆ ಹೊದಿಕೆ ವಿತರಿಸುವ ಮೂಲಕ ಗಮನ ಸೆಳೆದಿದ್ದಾರೆ.

ತಮ್ಮ ಸ್ವಂತ ಖರ್ಚಿನಲ್ಲಿ ನಗರದ ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಆಸ್ಪತ್ರೆಗಳಲ್ಲಿ ಒಟ್ಟು 1,000 ಬೆಚ್ಚನೆಯ ಹೊದಿಕೆ ಹಾಗೂ ಕಂಬಳಿಗಳನ್ನು ವಿತರಿಸಿದರು.

ಬೀದರ್‌ನಲ್ಲಿ ಅತಿ ಕಡಿಮೆ ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಚಳಿಯಿಂದ ರಕ್ಷಣೆ ಒದಗಿಸಲು ನಿರ್ಗತಿಕರಿಗೆ ಹೊದಿಕೆ ವಿತರಿಸಲಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದರು.

ADVERTISEMENT

ಸಾಮಾಜಿಕ ಚಟುವಟಿಕೆಯ ಭಾಗವಾಗಿ ವಿದ್ಯಾರ್ಥಿಗಳಿಂದ ಪ್ರತಿ ವರ್ಷ ಚಳಿಗಾಲದಲ್ಲಿ ಹೊದಿಕೆ ವಿತರಿಸಲಾಗುತ್ತದೆ. ಭೂಕಂಪ, ಪ್ರವಾಹ ಸೇರಿದಂತೆ ನೈಸರ್ಗಿಕ ವಿಪತ್ತು ಹಾಗೂ ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲೂ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.