ADVERTISEMENT

ಶಂಕರಾಚಾರ್ಯ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 9 ಮೇ 2019, 15:33 IST
Last Updated 9 ಮೇ 2019, 15:33 IST
ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಬೀದರ್ ಉಪ ವಿಭಾಗಾಧಿಕಾರಿ ಡಾ.ಶಂಕರ ವಣಕ್ಯಾಳ ಉದ್ಘಾಟಿಸಿದರು
ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಬೀದರ್ ಉಪ ವಿಭಾಗಾಧಿಕಾರಿ ಡಾ.ಶಂಕರ ವಣಕ್ಯಾಳ ಉದ್ಘಾಟಿಸಿದರು   

ಬೀದರ್: ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು.

ಬೀದರ್ ಉಪ ವಿಭಾಗಾಧಿಕಾರಿ ಡಾ.ಶಂಕರ ವಣಕ್ಯಾಳ ಅವರು ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ, ಶಂಕರ ಸೇವಾ ಸಮಿತಿಯ ಅಧ್ಯಕ್ಷ ವಿಜಯಕುಮಾರ ದೇಶಪಾಂಡೆ, ಸಂಯೋಜಕರಾದ ಶಾಮಕಾಂತ ಕುಲಕರ್ಣಿ, ಉಪಾಧ್ಯಕ್ಷ ರಾಜೇಂದ್ರ ಭಾಸವಾಡ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಇಂದು
ಬೀದರ್:
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಮೇ 10ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.

ADVERTISEMENT

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ ಅವರು ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.