ADVERTISEMENT

ಶಿಲ್ಪಾ ರಾಷ್ಟ್ರಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 3:41 IST
Last Updated 11 ಏಪ್ರಿಲ್ 2021, 3:41 IST
ಶಿಲ್ಪಾ
ಶಿಲ್ಪಾ   

ಭಾಲ್ಕಿ: ತಾಲ್ಲೂಕಿನ ಹಜನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಶಿಲ್ಪಾ ಗೌತಮ ಅವರು ಇನ್‍ಸ್ಪೈರ್ ಮಾನಕ್ ಅವಾರ್ಡ್ ರಾಷ್ಟ್ರಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸುವ ಅರ್ಹತೆ ಪಡೆದು ಕೊಂಡಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನವದೆಹಲಿ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಸಾರ್ವಾಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಈಚೆಗೆ ನಡೆದ ರಾಜ್ಯಮಟ್ಟದ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿನಿ ಶಿಲ್ಪಾಗೆ ಇನ್‍ಸ್ಪೈರ್ ಮಾನಕ್ ಅವಾರ್ಡ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಸಹ ಶಿಕ್ಷಕಿ ಕಾವೇರಿ ಮಾರ್ಗದರ್ಶನದಲ್ಲಿ ತುಪ್ಪದ ಹೀರೆಕಾಯಿಯ ನಾರಿನ ಉಪಯೋಗಗಳು ಎಂಬ ವಿಷಯದ ಮೇಲೆ ವಿದ್ಯಾರ್ಥಿನಿ ಶಿಲ್ಪಾ ಪ್ರೊಜೆಕ್ಟ್ ಮಂಡಿಸಿದ್ದರು. ಏ.23 ರಿಂದ 27ರ ವರೆಗೆ ಗುಜರಾತ್‍ನಲ್ಲಿ ಇನ್‍ಸ್ಪೈರ್ ಮಾನಕ್ ಅವಾರ್ಡ್ ರಾಷ್ಟ್ರ ಮಟ್ಟದ ಕಾರ್ಯಕ್ರಮ ನಡೆಯಲಿದ್ದು, ವಿದ್ಯಾರ್ಥಿನಿ ಶಿಲ್ಪಾ ತನ್ನ ಪ್ರೊಜೆಕ್ಟ್ ಮಂಡಿಸಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.