ಬೀದರ್: ಇಲ್ಲಿಯ ಸಿದ್ಧಾರೂಢ ಮಠದಲ್ಲಿ ನವೆಂಬರ್ 16 ರಿಂದ 20 ರವರೆಗೆ ಶಿವಕುಮಾರ ಸ್ವಾಮೀಜಿ ಅವರ 78ನೇ ಜಯಂತಿ ಮಹೋತ್ಸವ ಜರುಗಲಿದೆ.
ಶ್ರೀಗಳು ಪ್ರತಿ ದಿನ ಬೆಳಿಗ್ಗೆ 8 ರಿಂದ 10 ಹಾಗೂ ಸಂಜೆ 6 ರಿಂದ 8 ರವರೆಗೆ ಆಯ್ದ ವಿಷಯಗಳ ಕುರಿತು ಪ್ರವಚನ ನೀಡಲಿದ್ದಾರೆ. ನಾಡಿನ ಪೂಜ್ಯರು ಉಪದೇಶಾಮೃತ ಕೊಡಲಿದ್ದಾರೆ.
ಭಕ್ತರು ನಾಣ್ಯಗಳಿಂದ ಡಾ. ಶಿವಕುಮಾರ ಸ್ವಾಮೀಜಿ ಅವರ ತುಲಾಭಾರ ಮಾಡಲಿದ್ದಾರೆ. ಶ್ರೀಗಳ ಜನ್ಮದಿನದ ಪ್ರಯುಕ್ತ ನ. 17 ರಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಐದು ದಿನಗಳ ಜ್ಞಾನ ದಾಸೋಹ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಚಂದ್ರಪ್ಪ ಭತಮುರ್ಗೆ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.