ಹುಮನಾಬಾದ್: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಶ್ರಾವಣ ಸೋಮವಾರದ ಅಂಗವಾಗಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.
ಎಲ್ಲ ಮಾಸಗಳಲ್ಲಿ ಶ್ರಾವಣ ಮಾಸವು ಅತ್ಯಂತ ಶ್ರೇಷ್ಠ ಮಾಸವೆಂಬ ಪ್ರತೀತಿ ಇದೆ. ಶ್ರಾವಣದ ಪ್ರತಿ ಸೋಮವಾರವು ಹುಮನಾಬಾದ್ ಪಟ್ಟಣದ ವೀರಭದ್ರೇಶ್ವರ ದೇವಾಲಯ, ಹಳ್ಳಿಖೇಡ(ಬಿ) ಪಟ್ಟಣದ ಹೊರವಲಯದ ಸೀಮಿ ನಾಗನಾಥೇಶ್ವರ, ಹಳಿಖೇಡ್(ಕೆ) ಗ್ರಾಮದಲ್ಲಿನ ಕೈಲಾಸನಾಥೇಶ್ವರ ದೇವಸ್ಥಾನ ಹಾಗೂ ಚಿಟಗುಪ್ಪ ತಾಲ್ಲೂಕಿನ ಚಾಂಗಲೇರಾ ವೀರಭದ್ರೇಶ್ವರ, ಕರಕನ್ನಳ್ಳಿ ಬಕ್ಕಪ್ರಭು ದೇವಸ್ಥಾನದಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಕಾಯಿ, ಕರ್ಪೂರ, ಹೂ ಅರ್ಪಿಸಿದ ಭಕ್ತರು ದೇವರಿಗೆ ನಮಿಸಿದರು. ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ, ಭೀಮರಾವ ಪಾಟೀಲ ಸೇರಿದಂತೆ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.