
ಹಿಂದುತ್ವಪರ ಸಂಘಟನೆಗಳ ಕಾರ್ಯಕರ್ತರು ಮೆಹಕರ್ ಪೊಲೀಸ್ ಠಾಣೆ ಎದುರು ಬುಧವಾರ ರಾತ್ರಿ ಪ್ರತಿಭಟಿಸಿದರು
ಹುಲಸೂರ (ಬೀದರ್ ಜಿಲ್ಲೆ): ಇಲ್ಲಿನ ಅಟ್ಟರಗಾ ಗ್ರಾಮದ ಯುವಕ ಕಾಳಿದಾಸ್ ಸೂರ್ಯವಂಶಿ ಎಂಬಾತ ಶ್ರೀರಾಮಚಂದ್ರನ ನಿಂದಿಸಿ ಅವಹೇಳನ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಇದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಯುವಕನನ್ನೂ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಹಿಂದುತ್ವಪರ ಸಂಘಟನೆಗಳ ಕಾರ್ಯಕರ್ತರು ಮೆಹಕರ್ ಪೊಲೀಸ್ ಠಾಣೆ ಎದುರು ಜಮಾಯಿಸಿ ಬುಧವಾರ ರಾತ್ರಿ ಪ್ರತಿಭಟಿಸಿದರು. ಮೆಹಕರ್–ಭಾಲ್ಕಿ ರಸ್ತೆಯಲ್ಲಿ ವಾಹನ ಸಂಚಾರ ತಡೆದು ಆಕ್ರೋಶ ಹೊರಹಾಕಿದರು.
ಕಾಳಿದಾಸ್ ಸೂರ್ಯವಂಶಿ ರೈಲಿನಲ್ಲಿ ಸ್ನೇಹಿತರೊಂದಿಗೆ ಕುಳಿತು ಮರಾಠಿ ಭಾಷೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಹೊಗಳುತ್ತಲೇ ಶ್ರೀರಾಮಚಂದ್ರನನ್ನು ತೆಗಳಿ, ನಿಂದಿಸಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.