ಬೀದರ್: ಈಚೆಗೆ ತುಮಕೂರಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ಧಗಂಗಾ ಮಠವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಹೇಳಿಕೆ ಖಂಡನೀಯವಾದದ್ದು’ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.
‘ಪೌರತ್ವ ತಿದ್ದುಪಡಿ ಕಾಯ್ದೆ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಇದು ದೇಶಕ್ಕೆ ಹಾಗೂ ದೇಶದ ಕೋಮು ಸೌಹಾರ್ದತೆಗೆ ಸಂಬಂಧಿಸಿದ ವಿಷಯವಾಗಿದೆ. ದೇಶದಲ್ಲಿ ಶಾಂತಿ, ಸೌಹಾರ್ದತೆಯನ್ನು ಕದಡಿ, ಶಾಂತಿ ಭಂಗ ಮಾಡುತ್ತಿರುವ ಹಾಗೂ ಮುಸ್ಲಿಂರಿಗೆ ದಾರಿ ತಪ್ಪಿಸುತ್ತಿರುವ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ಬಗ್ಗೆ ಜನತೆಯ ಗಮನಕ್ಕೆ ತಂದಿರುವುದರಲ್ಲಿ ಯಾವುದೇ ರೀತಿಯ ತಪ್ಪಿಲ್ಲ’ ಎಂದರು.
‘ಸಿದ್ಧಗಂಗಾ ಮಠವನ್ನು ಅಪವಿತ್ರಗೊಳಿಸುವಂತಹ ಯಾವುದೇ ಕೆಲಸ ಪ್ರಧಾನಿ ಮಾಡಿಲ್ಲ. ನಮ್ಮದು ದೇಶದ ಸಂಸ್ಕೃತಿ, ಆಚಾರ, ವಿಚಾರಗಳನ್ನು ಗೌರವಿಸುವುದಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.