ಬಸವಕಲ್ಯಾಣ: ಈ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಏಪ್ರಿಲ್ 7 ಮತ್ತು 8 ರಂದು ಬರುತ್ತಿದ್ದು, ವಿವಿಧೆಡೆಯ ಸಭೆಗಳಲ್ಲಿ ಪಾಲ್ಗೊಳ್ಳುವರು.
ಏಪ್ರಿಲ್ 7 ರಂದು ಮಧ್ಯಾಹ್ನ 12ರಿಂದ ಸಂಜೆ 7.30 ಗಂಟೆಯ ವರೆಗೆ ವಿವಿಧೆಡೆ ಭೇಟಿ ನೀಡುವರು. ಪ್ರಥಮವಾಗಿ ಮುಡಬಿಯಲ್ಲಿ ಬಹಿರಂಗ ಸಭೆ ನಡೆಯುವುದು. ನಂತರ ನಗರದ ಸಾಹಿಲ್ ಸಭಾಂಗಣದಲ್ಲಿ ಸಭೆ, ವಿವಿಧ ಸಮುದಾಯದ ಪ್ರಮುಖರೊಂದಿಗೆ ಚರ್ಚೆ ನಡೆಸುವರು. ಬಳಿಕ ನಾರಾಯಣಪುರ ಹಾಗೂ ಮೋರಖಂಡಿಯಲ್ಲಿ ಬಹಿರಂಗ ಸಭೆ ನಡೆಸುವರು.
ಏ.8ರಂದು ಮಧ್ಯಾಹ್ನ 12.30 ರಿಂದ ರಾತ್ರಿ 8.30 ಗಂಟೆಯವರೆಗೆ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಕೊಹಿನೂರ, ಮಂಠಾಳಗಳಲ್ಲಿ ಬಹಿರಂಗ ಸಭೆ ನಡೆಸಿದ ಬಳಿಕ ಹುಲಸೂರನಲ್ಲಿನ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವರು. ರಾತ್ರಿ ನಗರದ ಭೋಸಗೆ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.