ADVERTISEMENT

ಶಿವಕುಮಾರ ಬಗ್ಗೆ ನಮಗೆ ಗೊತ್ತಿದೆ: ರಮೇಶ ಜಾರಕಿಹೊಳಿ

ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 14:19 IST
Last Updated 3 ಜುಲೈ 2020, 14:19 IST
ಬೀದರ್‌ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿಯ ಬಳಿ ಕಾರಂಜಾ ಜಲಾಶಯ ವೀಕ್ಷಿಸಿದ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರೊಂದಿಗೆ ಕುಶಲೋಪರಿಯಲ್ಲಿ ತೊಡಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಶಾಸಕರಾದ ರಹೀಂ ಖಾನ್, ರಾಜಶೇಖರ ಪಾಟೀಲ, ಬಂಡೆಪ್ಪ ಕಾಶೆಂಪೂರ, ಭಗವಂತ ಖೂಬಾ ಹಾಗೂ ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ

ಬೀದರ್: ‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ಅವರು ಯಾವ ಪಕ್ಷದಲ್ಲಿದ್ದರೂ ನಮ್ಮ ನಾಯಕರು. ಇದರಲ್ಲಿ ಎರಡು ಮಾತಿಲ್ಲ. ಆದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಎಷ್ಟು ಗಂಡಸರಿದ್ದಾರೆ ಎನ್ನುವುದು ನಮಗೆ ಗೊತ್ತಿದೆ’ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ ಸಮೀಪದ ಕಾರಂಜಾ ಜಲಾಶಯ ವೀಕ್ಷಿಸಿದ ನಂತರ ಮಾಧ್ಯಮ ಪ್ರತಿನಿಧಿಗಳು ‘ಡಿ.ಕೆ.ಶಿವಕುಮಾರ ಅವರು ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಕರ್ನಾಟಕ ಮಾಡುತ್ತೇನೆ’ ಎಂದು ಹೇಳಿದ್ದಾರೆ. ಅದಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಪ್ರಶ್ನಿಸಿದಾಗ ಮೇಲಿನಂತೆ ಉತ್ತರಿಸಿದರು.

‘ನಾನು ನೀರಾವರಿ ಯೋಜನೆಗಳ ಕಾಮಗಾರಿ ವೀಕ್ಷಣೆಗೆ ಇಲ್ಲಿಗೆ ಬಂದಿದ್ದೇನೆ. ಕಾಂಗ್ರೆಸ್ಸಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಇಲ್ಲಿನ ಶಾಸಕರಿಗೆ ಕೇಳಿ. ರಾಜಕೀಯ ಕುರಿತು ಇನ್ನೊಂದು ದಿನ ಚರ್ಚಿಸೋಣ’ ಎಂದು ಹೇಳಿ ಮುಂದೆ ಸಾಗಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.