ADVERTISEMENT

ಬೀದರ್‌ | ಸಿದ್ದರಾಮಯ್ಯ ಮುಸ್ಲಿಮರಾಗಿ ಮತಾಂತರ ಆಗಲಿ: ಭಗವಂತ ಖೂಬಾ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2025, 16:10 IST
Last Updated 28 ಏಪ್ರಿಲ್ 2025, 16:10 IST
ಭಗವಂತ ಖೂಬಾ
ಭಗವಂತ ಖೂಬಾ   

ಬೀದರ್‌: ‘ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಮುಸ್ಲಿಂ ತುಷ್ಟೀಕರಣ ಹೆಚ್ಚಾಗಿದೆ. ಮಾನಸಿಕವಾಗಿ ಇಸ್ಲಾಂ ಧರ್ಮ ಸ್ವೀಕರಿಸಿದ್ದೀರಿ ಎಂಬುದು ನಿಮ್ಮ ನಡವಳಿಕೆ, ಸರ್ಕಾರದ ಆಡಳಿತದಿಂದ ಗೊತ್ತಾಗುತ್ತದೆ. ಒಂದು ಸಲ ನೀವು ಮುಸ್ಲಿಮರಾಗಿ ಮತಾಂತರವಾಗಿ. ಆಗ ನೀವೊಬ್ಬ ಡೋಂಗಿ ಹಿಂದೂ ಎಂಬುದು ಗೊತ್ತಾಗುತ್ತದೆ’ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಹೇಳಿದರು.

‘ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಧರ್ಮ ಕೇಳಿ ಗುಂಡು ಹಾರಿಸಿದ್ದಾರೆ. ಪಾಕಿಸ್ತಾನದ ಪ್ರಾಯೋಜಿತ ಭಯೋತ್ಪಾದಕರು ಈ ಕೃತ್ಯ ಎಸಗಿರುವುದು ಸಾಬೀತಾಗಿದೆ. ಹೀಗಿದ್ದರೂ ಪಾಕಿಸ್ತಾನದೊಂದಿಗೆ ಯುದ್ಧದ ಅವಶ್ಯಕತೆಯಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯನ ಈ ದೇಶದ ಪ್ರಧಾನಿಯಲ್ಲ. ಇತಿಮಿತಿಯಲ್ಲಿ ಹೇಳಿಕೆ ಕೊಡಬೇಕು. ಪಾಕಿಸ್ತಾನದ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಎನ್ನುವುದನ್ನು ಈ ದೇಶದ ಪ್ರಧಾನಿ ನಿರ್ಧರಿಸುತ್ತಾರೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT