ಬೀದರ್: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಹಾಗೂ ಸಿದ್ಧಾರೆಡ್ಡಿ ನಾಗೂರಾ ಅಭಿನಂದನೆ ಸಮಿತಿ ವತಿಯಿಂದ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಸೆ. 14 ರಂದು ಸಂಜೆ 5.30ಕ್ಕೆ ಸಿದ್ಧಲೋಕ ಅಭಿನಂದನಾ ಗ್ರಂಥ ಜನಾರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಸಿ. ವೀರಣ್ಣ ಸಮಾರಂಭವನ್ನು ಉದ್ಘಾಟಿಸುವರು.
ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಸಿದ್ಧಾರೂಢ ಮಠದ ಶಿವಕುಮಾರ ಸ್ವಾಮೀಜಿ ಸಾನಿಧ್ಯ, ಮಲ್ಲಯ್ಯಗಿರಿ, ದೇಗಲಮಡಿ ಆಶ್ರಮದ ಡಾ. ಬಸವಲಿಂಗ ಅವಧೂತರು ನೇತೃತ್ವ, ಖಾನಾಪುರದ ಆನಂದ ಆಶ್ರಮದ ಜಗದೇಶ್ವರಿ ಮಾತೆ ಸಮ್ಮುಖ ವಹಿಸುವರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಅಧ್ಯಕ್ಷತೆ ವಹಿಸುವರು. ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಬಿ. ಪೂಜಾರ ಗ್ರಂಥ ಬಿಡುಗಡೆ ಮಾಡುವರು.
ಮುಖ್ಯ ಅತಿಥಿಗಳಾಗಿ ಕೆಆರ್‍ಇ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಕೆಆರ್‍ಇ ನ್ಯಾಸ್ ಅಧ್ಯಕ್ಷ ಡಾ. ಬಸವರಾಜ ಪಾಟೀಲ ಅಷ್ಟೂರು, ಸಾಹಿತಿ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರ ಉಪ ನಿರ್ದೇಶಕ ಟಿ.ಆರ್. ದೊಡ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ ಹಂಚನಾಳ ಪಾಲ್ಗೊಳ್ಳುವರು.
ನಿವೃತ್ತ ಮುಖ್ಯಶಿಕ್ಷಕ ಸಿದ್ಧಾರೆಡ್ಡಿ ನಾಗೂರಾ ಅಭಿನಂದಿತರ ನುಡಿ ಆಡುವರು. ಕರ್ನಾಟಕ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಬಸವರಾಜ ಬಲ್ಲೂರು ಆಶಯ ಭಾಷಣ ಮಾಡುವರು. ಮುಖ್ಯಶಿಕ್ಷಕರಾದ ನಾಗಲಿಂಗಯ್ಯ ವಂಗಾಪಲ್ಲಿ, ಬಸವರಾಜ ಬಿರಾದಾರ, ಎಸ್.ಎಂ. ಜನವಾಡಕರ್ ಅವರಿಗೆ ಗೌರವ ಸಮರ್ಪಿಸಲಾಗುವುದು.
ಅಭಿನಂದನ ಸಮಿತಿಯ ಅಧ್ಯಕ್ಷ ಸಹಜಾನಂದ ಕಂದಗೂಳ, ಎನ್‍ಜಿಒ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಬಾಲಾಜಿ ಬಿರಾದಾರ, ವಿಜಯಕುಮಾರ ಬೆಳಮಗಿ, ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪುರ ಉಪಸ್ಥಿತರಿರುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.